ಡೈಲಿವಾರ್ತೆ:23/ಏಪ್ರಿಲ್ /2026

ಎಕ್ಸಲೆಂಟ್ ಕುಂದಾಪುರ ಹೈಸ್ಕೂಲುಗೆ ಶೇ.100 ಫಲಿತಾಂಶ

ಕುಂದಾಪುರ: 2015-2026ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ–1ರ ಫಲಿತಾಂಶ ಪ್ರಕಟವಾಗಿದ್ದು, ಸುಣ್ಣಾರಿ, ಕುಂದಾಪುರದ ಎಕ್ಸಲೆಂಟ್ ಹೈಸ್ಕೂಲು ಅದ್ಭುತ ಸಾಧನೆ ಮಾಡಿದೆ. ಹತ್ತನೇ ತರಗತಿಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 28 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು, ಸಂಸ್ಥೆ ಶೇಕಡಾ 100 ಫಲಿತಾಂಶವನ್ನು ದಾಖಲಿಸಿದೆ.

ಈ ಸಾಧನೆಯಲ್ಲಿ 9 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವುದು ಗಮನಾರ್ಹ. ನಿರಂತರ ಪರಿಶ್ರಮ, ಶಿಸ್ತುಬದ್ಧ ಪಾಠ್ಯಕ್ರಮ ಮತ್ತು ಶಿಕ್ಷಕರ ಸಮರ್ಪಿತ ಮಾರ್ಗದರ್ಶನದ ಫಲವಾಗಿ ಈ ಯಶಸ್ಸು ಸಾಧ್ಯವಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಸಂಸ್ಥೆಯ ಈ ಅತ್ಯುತ್ತಮ ಸಾಧನೆಗೆ ಎಕ್ಸಲೆಂಟ್ ಆಡಳಿತ ಮಂಡಳಿಯ ಅಧ್ಯಕ್ಷ ಎಂ. ಮಹೇಶ್ ಹೆಗ್ಡೆ, ಪ್ರಾಂಶುಪಾಲ ನಾಗರಾಜ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ಸರೋಜಿನಿ ಪಿ. ಆಚಾರ್ಯ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಅವರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.