ಡೈಲಿವಾರ್ತೆ:23/ಏಪ್ರಿಲ್ /2026

ಬಂಟ್ವಾಳ ಕೆಳಗಿನಪೇಟೆಯ ತೌಹೀದ್ ಆಂಗ್ಲ ಮಾಧ್ಯಮ ಶಾಲೆ ಶೇಕಡಾ 100 ಫಲಿತಾಂಶ

ಬಂಟ್ವಾಳ : 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಂಟ್ವಾಳ ಕೆಳಗಿನಪೇಟೆಯ ತೌಹೀದ್ ಆಂಗ್ಲ ಮಾಧ್ಯಮ ಶಾಲೆ ಶೇಕಡಾ 100 ಫಲಿತಾಂಶ ದಾಖಲಿಸಿದೆ.

ಒಟ್ಟು 105 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 19 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 68 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಫಾತಿಮ ಶಮ್ರಾ (598) ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾದರೆ, ನಫ ಝುಲೈಕ (593) ದ್ವಿತೀಯ ಸ್ಥಾನ ಹಾಗೂ ರಿಫ್ಕಾ ಫಾತಿಮ ಕೆ ಎಸ್ (591) ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.