ಡೈಲಿವಾರ್ತೆ:24/ಏಪ್ರಿಲ್ /2026

ಚೌಡನಕುಪ್ಪೆ ಗ್ರಾಮದ ಸಂಶೋಧನಾರ್ಥಿ ನವೀನ ಜಿ. ರವರಿಗೆ ಡಾಕ್ಟರೇಟ್ ಪದವಿ ಪ್ರದಾನ

ತುಮಕೂರು: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಚೌಡನಕುಪ್ಪೆ ಗ್ರಾಮದ ನಿವಾಸಿ ಶ್ರೀ ಗಂಗಸ್ವಾಮಿ ಮತ್ತು ಜಯಮ್ಮ ದಂಪತಿಯ ಕಿರಿಯ ಪುತ್ರ, ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಸಂಶೋಧನಾರ್ಥಿ ನವೀನ ಜಿ. ರವರಿಗೆ ಪಿಎಚ್.ಡಿ ಪದವಿ ಲಭಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯದ ನಿಕಟಪೂರ್ವ ಕುಲಸಚಿವರು (ಆಡಳಿತ) ಹಾಗೂ ಸಮಾಜಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಬಿ.ಸಿ. ಮೈಲಾರಪ್ಪ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ಬೆಂಗಳೂರು ನಗರದ ಪೌರಕಾರ್ಮಿಕರ ಮೇಲೆ ಕೋವಿಡ್-19 ಸಾಂಕ್ರಾಮಿಕ ರೋಗದ ಪರಿಣಾಮಗಳು: ಒಂದು ಸಮಾಜಶಾಸ್ತ್ರೀಯ ಅಧ್ಯಯನ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ವೇಳೆಯಲ್ಲಿ ನವೀನ ಜಿ. ಅವರ ಶೈಕ್ಷಣಿಕ ಸಾಧನೆಗಾಗಿ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಮತ್ತು ಚೌಡನಕುಪ್ಪೆ ಗ್ರಾಮದ ಮತ್ತು ಸುತ್ತಮುತ್ತಲಿನವರು ಸೇರಿ ಶುಭ ಕೋರಿ ಅಭಿನಂದನೆ ಸಲ್ಲಿಸಿದ್ದಾರೆ.