ಡೈಲಿವಾರ್ತೆ:24/ಏಪ್ರಿಲ್ /2026

ಪುದು ಶಾಲೆ: ಎಸ್.ಎಸ್.ಎಲ್.ಸಿಯಲ್ಲಿ ಶೇಕಡಾ 100 ಫಲಿತಾಂಶ

ಬಂಟ್ವಾಳ : ಪ್ರಸ್ತುತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪುದು ಮಾರಿಪಳ್ಳ ದ ಮೌಲಾನಾ ಆಝಾದ್ ಪಬ್ಲಿಕ್ ಸ್ಕೂಲ್ ಶೇಕಡಾ 100 ಫಲಿತಾಂಶ ಪಡೆದುಕೊಂಡಿದೆ. ಒಟ್ಟು 23 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ , 5 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿಯಲ್ಲಿ , ಮೂವರು ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಶಾಲೆಯಲ್ಲಿ ಆಯಿಷಾ ಆಸೀಫ ಪ್ರಥಮ, ಆಯಿಷಾ ಜಝೀಲಾ ದ್ವಿತೀಯ ಹಾಗೂ ಖತೀಜ ಮಾಹಿನ್ ಶಾಲೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.