



ಡೈಲಿವಾರ್ತೆ: 09/ಮೇ/2026

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ

ಮೂಡುಬಿದಿರೆ: ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಬನ್ನಡ್ಕ ಸೋನ್ಸ್ ಫಾರ್ಮ್ ನ ಅಮನೊಟ್ಟು ಕ್ರಾಸ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.
ಈ ಸಂದರ್ಭ ಮೂಡುಬಿದಿರೆ ಕಡೆಯಿಂದ ಕಾರ್ಕಳ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಮತ್ತು ಕಾರನ್ನು ರಕ್ಷಿಸಲು ಹೋಗಿ ಬಸ್ ಪಲ್ಟಿಯಾಗಿದ್ದು, ದ್ವಿಚಕ್ರ ವಾಹನದ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.