ಡೈಲಿವಾರ್ತೆ: 22/ಮೇ/2026

ಹಿರಿಯ ವೈದ್ಯ ಡಾ. ದಿನೇಶ್ ಭಟ್ಕಳ್ ಆತ್ಮಹತ್ಯೆ; ಕ್ಯಾನ್ಸರ್ ನೋವಿಗೆ ಬೇಸತ್ತು ಜೀವಂತಿಕೆ ಅಂತ್ಯ

ಬೆಳಗಾವಿ: ಕಳೆದ ನಾಲ್ಕು ದಶಕಗಳಿಂದ KLE Society ಸಂಸ್ಥೆಯ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ವೈದ್ಯ ಡಾ. ದಿನೇಶ್ ಭಟ್ಕಳ್ ಅವರು ಶುಕ್ರವಾರ ಬೆಳಗಾವಿಯ ಟಿಳಕವಾಡಿಯ ಮಂಡೋಳಿ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.

ಅಂಕೋಲಾ ಮೂಲದವರಾದ ಡಾ. ದಿನೇಶ್ ಭಟ್ಕಳ್ ಅವರು ಹಲವು ವರ್ಷಗಳಿಂದ KLE Society ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಬೆಳಗಾವಿಗೆ ಬಂದು ಕುಟುಂಬದೊಂದಿಗೆ ನೆಲೆಸಿದ್ದರು ಎನ್ನಲಾಗಿದೆ. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಅವರಿಗೆ ಶ್ವಾಸಕೋಶ ಕ್ಯಾನ್ಸರ್ ಇರುವುದು ದೃಢಪಟ್ಟಿತ್ತು. ಆರೋಗ್ಯ ಸಮಸ್ಯೆಯಿಂದ ತೀವ್ರ ಎದೆನೋವು ಅನುಭವಿಸುತ್ತಿದ್ದ ಅವರು ತಮ್ಮ ಆಪ್ತರು ಹಾಗೂ ಸ್ನೇಹಿತರೊಂದಿಗೆ ನೋವನ್ನು ಹಂಚಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ. ಶುಕ್ರವಾರ ಬೆಳಗ್ಗೆ ಸಹಿಸಲಾಗದಷ್ಟು ಎದೆನೋವು ಕಾಣಿಸಿಕೊಂಡ ಹಿನ್ನೆಲೆ, ಮನೆಯಲ್ಲಿದ್ದ ತಮ್ಮ ವೈಯಕ್ತಿಕ ರಿವಾಲ್ವಾರ್ ಬಳಸಿ ಮನೆಯ ಗ್ಯಾಲರಿಯಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ.

ಆತ್ಮಹತ್ಯೆಗೆ ಮುನ್ನ ಡಾ. ದಿನೇಶ್ ಅವರು Prabhakar Kore ಸೇರಿದಂತೆ ತಮ್ಮ ಹಿತೈಷಿಗಳಿಗೆ ವಾಟ್ಸಪ್ ಸಂದೇಶ ಕಳುಹಿಸಿದ್ದು, “ನನಗೆ ನೀವು ಇಷ್ಟು ವರ್ಷ ಸಹಾಯ ಮಾಡಿದ್ದೀರಿ. ಆದರೆ ತೀವ್ರ ಎದೆನೋವನ್ನು ಸಹಿಸಲಾಗುತ್ತಿಲ್ಲ. ನಾನು ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಮಾಡಿ ಎಂದು ಉಲ್ಲೇಖಿಸಿರುವುದು ತಿಳಿದುಬಂದಿದೆ.ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. Narayan Bharamani ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ Belagavi Institute of Medical Sciences ಆಸ್ಪತ್ರೆಗೆ ರವಾನಿಸಲಾಗಿದೆ.ಹಿರಿಯ ವೈದ್ಯರ ಅಕಾಲಿಕ ನಿಧನ ಸುದ್ದಿ ವೈದ್ಯಕೀಯ ವಲಯ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ದುಃಖದ ವಾತಾವರಣ ಮೂಡಿಸಿದೆ.