




ಡೈಲಿವಾರ್ತೆ: 24/ಮೇ/2026


ಮೇ 25 (ನಾಳೆ) ರಂದು ಬಂಟ್ವಾಳ ಕಾಂಗ್ರೆಸ್ ನಿಂದ ಬಿಜೆಪಿ ವಿರುದ್ಧ ಪ್ರತಿಭಟನೆ

ಬಂಟ್ವಾಳ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಪೆಟ್ರೋಲ್, ಡೀಸಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಮಾಡಿರುವ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಮೇ 25 ಸೋಮವಾರ
ಬೆಳಗ್ಗೆ 10.30 ಕ್ಕೆ ಬಿ.ಸಿ.ರೋಡಿನ
ರಕ್ತೇಶ್ವರಿ ದೇವಸ್ಥಾನದ ಬಳಿ ಪ್ರತಿಭಟನೆ ನಡೆಯಲಿದೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್ ಎಸ್ ಯು ಐ ಮತ್ತು ಮಹಿಳಾ ಕಾಂಗ್ರೆಸ್ ವತಿಯಿಂದ ನಡೆಯುವ ಈ ಪ್ರತಿಭಟನೆಯು
ಮಾಜಿ ಸಚಿವ, ಕ್ಷೇತ್ರದ ಮಾಜಿ ಶಾಸಕ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರುಗಳು, ಮುಂಚೂಣಿ ಘಟಕದ ಅಧ್ಯಕ್ಷರು – ಸದಸ್ಯರು ಪಂಚಾಯತ್ ಅಧ್ಯಕ್ಷರು-ಸದಸ್ಯರು, ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳು – ಸದಸ್ಯರುಗಳು, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು -ಸದಸ್ಯರು, ಯುವ ಕಾಂಗ್ರೆಸ್, ಎನ್ ಎಸ್ ಯು ಐ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಪಕ್ಷದ ಪ್ರಕಟನೆ ತಿಳಿಸಿದೆ.