ಡೈಲಿವಾರ್ತೆ: 02/ಜೂ./2026

ನೆಟ್ಲಮುಡ್ನೂರು: ಏಮಾಜೆಯ ದ.ಕ.ಜಿ.ಪಂ. ಕಿ.ಪ್ರಾ.ಶಾಲೆ ಶಾಲಾ ಪ್ರಾರಂಭೋತ್ಸವ

ಬಂಟ್ವಾಳ : ಹೊಸ ಕನಸುಗಳೊಂದಿಗೆ ಹೊಸ ಶೈಕ್ಷಣಿಕ ವರ್ಷವನ್ನು ಆರಂಭಿಸಿರುವ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಗೋವಿಂದರಾಜ್ ಹೇಳಿದರು.

ನೆಟ್ಲಮುಡ್ನೂರು ಗ್ರಾಮದ ಏಮಾಜೆಯ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಉದ್ಯಮಿ ಸದಾಶಿವ ಶೆಟ್ಟಿ ದತ್ತ ಕೃಪಾ ಅವರು ಹೊಸದಾಗಿ ಸೇರ್ಪಡೆಗೊಂಡ ಎಲ್.ಕೆ.ಜಿ ಹಾಗೂ ಒಂದನೇ ತರಗತಿಗೆ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸವನ್ನು ಕೈಗೊಂಡು ವಿಭಿನ್ನವಾಗಿ ವಿದ್ಯಾರ್ಥಿಗಳನ್ನು ಹೊಸ ಶೈಕ್ಷಣಿಕ ವರ್ಷಕ್ಕೆ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷೆ ಮಲ್ಲಿಕಾ ಗಣೇಶ್ ಆಚಾರ್ಯ, ಉಪಾಧ್ಯಕ್ಷ ಹರೀಶ್ ಕುಲಾಲ್, ನೆಟ್ಲಮುಡ್ನೂರು ಗ್ರಾ.ಪಂ.ಮಾಜಿ ಅಧ್ಯಕ್ಷೆ ಸಮಿತಾ ಡಿ ಪೂಜಾರಿ, ಸದಸ್ಯ ಧನಂಜಯ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಡಾ. ತ್ರಿವೇಣಿ ರಮೇಶ್ ಸ್ವಾಗತಿಸಿ,
ಸಹ ಶಿಕ್ಷಕ ಉದಯ ಚಂದ್ರ ಕೆ ಎಸ್ ವಂದಿಸಿದರು. ಶಿಕ್ಷಕಿಯರಾದ ಅಕ್ಷತಾ ಶೆಟ್ಟಿ ಹಾಗೂ ಐಸಮ್ಮಕಾರ್ಯಕ್ರಮ ನಿರೂಪಿಸಿದರು.