ಡೈಲಿವಾರ್ತೆ: 05/ಜೂ./2026

ಗಂಗೊಳ್ಳಿ – ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ – ಶಾಲಾ ಪ್ರಾರಂಭೋತ್ಸವ

ಗಂಗೊಳ್ಳಿ: ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇಲ್ಲಿ ಜೂನ್ 1 ರಂದು ಶಾಲಾ ಪ್ರಾರಂಭೋತ್ಸವವನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು.

ಶಾಲಾ ಮುಂಭಾಗವನ್ನು ತಳಿರು ತೋರಣಗಳಿಂದ ಸಿಂಗರಿಸಿ ತರಗತಿ ಕೋಣೆಗಳನ್ನು ಬರಹ ಚಿತ್ತಾರಗಳಿಂದ ಸಜ್ಜುಗೊಳಿಸುವುದರ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಿಲಾಯಿತು.
ತದನಂತರ ಶಾಲಾ ಸಭಾಂಗಣದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಂದ ಶೈಕ್ಷಣಿಕ ವರ್ಷದ ಮೊದಲ ಪ್ರಾರ್ಥನಾ ವಿಧಿಯು ನೆರವೇರಲ್ಪಟ್ಟವು., ನೂತನವಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳನ್ನು
ಪರಿಚಯಿಸುವುದರೊಂದಿಗೆ ಅವರನ್ನು ಸ್ವಾಗತಿಸಲಾಯಿತು.


ಈ ಸಂದರ್ಭದಲ್ಲಿ ಕಾಮೆ೯ಲ್ ಸಂಸ್ಥೆಯ ಮುಖ್ಯಸ್ಥೆ ಧಮ೯ಭಗಿನಿ ಗ್ರೇಸಿ ಲೋಬೋ ಅವರು ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.ಮುಖ್ಯ ಶಿಕ್ಷಕಿ ಧಮ೯ಭಗಿನಿ ವಿಜಯ ಕ್ರಾಸ್ತಾ ಅವರು ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಉಪ ಮುಖ್ಯ ಶಿಕ್ಷಕಿ ಧಮ೯ಭಗಿನಿ ಸವಿತಾ ಹಾಗೂ ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.