



ಡೈಲಿವಾರ್ತೆ: 05/ಜೂ./2026


ವಿಶ್ವ ಪರಿಸರ ದಿನ: ಅಮಾಸೆಬೈಲಿನಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ನೇತೃತ್ವದಲ್ಲಿ ‘ತಾಯಿಯ ಹೆಸರಿನಲ್ಲಿ ಒಂದು ಗಿಡ’ ಅಭಿಯಾನ

ಕುಂದಾಪುರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ.05 ಶುಕ್ರವಾರ ಅಮಾಸೆಬೈಲಿನ ಸರ್ಕಾರಿ ಪ್ರೌಢಶಾಲಾ ವಠಾರದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಆಗುಂಬೆ ವನ್ಯಜೀವಿ ವಲಯ ಹಾಗೂ ಶಾಲೆಯ ಸಹಯೋಗದಲ್ಲಿ ‘ತಾಯಿಯ ಹೆಸರಿನಲ್ಲಿ ಒಂದು ಗಿಡ’ ನೆಡುವ ಕಾರ್ಯಕ್ರಮ ನಡೆಯಿತು.
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ವಿದ್ಯಾರ್ಥಿಗಳೊಂದಿಗೆ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಪ್ರತಿಯೊಬ್ಬರೂ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಟ್ಟು ಪೋಷಿಸಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಮಕ್ಕಳಿಂದಲೇ ಈ ಜಾಗೃತಿ ಆರಂಭವಾಗಬೇಕು. ಒಂದು ಗಿಡ ನೆಟ್ಟರೆ ಅದು ಮುಂದಿನ ಪೀಳಿಗೆಗೆ ನಾವು ನೀಡುವ ಅಮೂಲ್ಯ ಕೊಡುಗೆ ಎಂದರು.
ಅರಣ್ಯ ಇಲಾಖೆಯ ಈ ಕಾರ್ಯಕ್ರಮ ಮಾದರಿ. ಶಾಲಾ ಹಂತದಲ್ಲೇ ಪರಿಸರ ಪ್ರೀತಿ ಬೆಳೆಸಿದರೆ ಹಸಿರು ಕರ್ನಾಟಕದ ಕನಸು ನನಸಾಗುತ್ತದೆ. ನೆಟ್ಟ ಗಿಡಗಳನ್ನು ವಿದ್ಯಾರ್ಥಿಗಳು ತಮ್ಮ ತಾಯಿಯಂತೆ ಆರೈಕೆ ಮಾಡಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಆಗುಂಬೆ ವನ್ಯಜೀವಿ ವಲಯ ಅಮಾಸೆಬೈಲು ಇದರ ಅರಣ್ಯ ಅಧಿಕಾರಿ ರೂಪೇಶ್ ಶಾಲಾ ಮುಖ್ಯೋಪಾಧ್ಯಯರಾದ ನಾಗರಾಜ್ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣಕುಮಾರ್ ಭಾಗವತ್,, ಶಾಲಾ ಅಧ್ಯಾಪಕವೃಂದದವರು, ಅರಣ್ಯ ಇಲಾಖೆಯ ಸಿಬ್ಬಂದಿಗಳು,ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು,ಹಾಗೂ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡು ವಿವಿಧ ಜಾತಿಯ ಸಸಿಗಳನ್ನು ನೆಟ್ಟರು.