ಡೈಲಿವಾರ್ತೆ: 08/ಜೂ./2026

ಮುಂಗಾರು ಮಳೆ ಚುರುಕು, ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; 2 ದಿನ ರೆಡ್‌ ಅಲರ್ಟ್‌

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು ದಕ್ಷಿಣ ಕನ್ನಡ, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಧಾರಾಕಾರ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಮನೆ, ಆಸ್ಪತ್ರೆ ಹಾಗೂ ಕಚೇರಿಗಳಿಗೆ ನೀರು ನುಗ್ಗಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಈ ಮಧ್ಯೆ, ಕೇಂದ್ರ ಹವಾಮಾನ ಇಲಾಖೆ (IMD) ಇಡೀ ರಾಜ್ಯಕ್ಕೆ ಜೂನ್ 9 (ಮಂಗಳವಾರ) ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಿಗೆ ಮತ್ತು ಜೂನ್ 10 (ಬುಧವಾರ) ರಾಜ್ಯಾದ್ಯಂತ ರೆಡ್ ಅಲರ್ಟ್ ಘೋಷಿಸಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.