ಡೈಲಿವಾರ್ತೆ: 10/ಜೂ./2026

ಬಂಟ್ವಾಳ: ವಿದ್ಯುತ್ ದುರಸ್ತಿ ಕಾರ್ಯ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತ – ಮೆಸ್ಕಾಂ ಸಿಬ್ಬಂದಿ ಸಾವು

ಬಂಟ್ವಾಳ: ಕರ್ತವ್ಯನಿರತ ಮೆಸ್ಕಾಂ ಉದ್ಯೋಗಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಶಂಭೂರು ಎಂಬಲ್ಲಿ ನಡೆದಿದೆ.

ಮೂಲತಃ ಮಿತ್ತೂರು ನಿವಾಸಿ ಚಂದ್ರಶೇಖರ ನಾಯ್ಕ ( 55) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಅವರು ಪಾಣೆಮಂಗಳೂರು ಮೆಸ್ಕಾಂ ಶಾಖೆಯಲ್ಲಿ ಸಹಾಯಕ ಮ್ಯಾಕನಿಕ್ ಹುದ್ದೆಯನ್ನು ನಿರ್ವಹಿಸುತ್ತಿದ್ದರು. ಬುಧವಾರ ಮಧ್ಯಾಹ್ನ ವೇಳೆ ಶಂಭೂರು ಸಮೀಪದ ಕುಂದಾಯಗೋಳಿ ಎಂಬಲ್ಲಿ ವಿದ್ಯುತ್ ಕಂಬವೊಂದು ತುಂಡಾಗಿ ಬಿದ್ದು ವಿದ್ಯುತ್ ಸಂಪರ್ಕ ‌ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಅಲ್ಲಿ ಕಾರ್ಯ ನಿರ್ವಹಿಸಿ ಬಳಿಕ ಅಲ್ಲಿಂದ ಇಲಾಖೆಯ ಸಿಬ್ಬಂದಿ ಜೊತೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕುಂದಾಯಗೋಳಿ ಎಂಬಲ್ಲಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಅದಾಗಲೇ ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರ ಸಹಿತ ಅಪಾರ ಸಂಖ್ಯೆಯ ಬಂಧು ಮಿತ್ರರನ್ನು ಅಗಲಿದ್ದಾರೆ.