ಡೈಲಿವಾರ್ತೆ: 20/ಜೂ./2026

ಮಣಿಪಾಲ: ಕಾರು-ಸ್ಕೂಟರ್ ಡಿಕ್ಕಿ; ಸವಾರ ಗಂಭೀರ

ಮಣಿಪಾಲ: ಮಣಿಪಾಲದ ಈಶ್ವರ ನಗರದ ಪೆಟ್ರೋಲ್ ಬಂಕ್ ಜಂಕ್ಷನ್ ಬಳಿ ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಗಾಯಗೊಂಡವರನ್ನು ಹೆರ್ಗ ಗ್ರಾಮದ ಗರಡಿಯನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಅಭಿಷೇಕ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಕೈ ಮತ್ತು ಕಾಲುಗಳಿಗೂ ಪೆಟ್ಟು ಬಿದ್ದಿದೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಕುಂದಾಪುರದಿಂದ ಬಜಗೋಳಿಯತ್ತ ಕಾರು ಚಲಿಸುತ್ತಿದ್ದಾಗ, ಪೆಟ್ರೋಲ್ ಬಂಕ್ ಬಳಿ ಸ್ಕೂಟರ್ ಸವಾರ ತಿರುವು ಪಡೆಯಲು ಪ್ರಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.