ಡೈಲಿವಾರ್ತೆ: 20/ಜೂ./2026

ಬಂಟ್ವಾಳ ಕೊಡಾಜೆ ಡಿಗ್ನಿಟಿ ಶಾಲೆ: ಶಾಲಾ ಸಂಸತ್ತು ಚುನಾವಣೆ; ಹಸನ್ ಅಬ್ದುಲ್ ಹಾಗೂ ಫಾತಿಮತ್ ಸ್ವಾಲಿಹ ನಾಯಕರಾಗಿ ಆಯ್ಕೆ

ಬಂಟ್ವಾಳ: ಇಲ್ಲಿನ ಕೊಡಾಜೆಯ ಡಿಗ್ನಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿನ ಚುನಾವಣೆ ಇತ್ತೀಚೆಗೆ ಅತ್ಯಂತ ವ್ಯವಸ್ಥಿತವಾಗಿ ಹಾಗೂ ಯಶಸ್ವಿಯಾಗಿ ಜರುಗಿತು. ಪ್ರಜಾಪ್ರಭುತ್ವದ ಮಾದರಿಯಲ್ಲಿ ನಡೆದ ಈ ಚುನಾವಣೆಯಲ್ಲಿ ವಿದ್ಯಾರ್ಥಿ ನಾಯಕನಾಗಿ ಹಸನ್ ಅಬ್ದುಲ್ ಫತ್ತಾಹ್ ಹಾಗೂ ವಿದ್ಯಾರ್ಥಿ ನಾಯಕಿಯಾಗಿ ಫಾತಿಮತ್ ಸ್ವಾಲಿಹ ಅವರು ಬಹುಮತದೊಂದಿಗೆ ಆಯ್ಕೆಯಾಗಿದ್ದಾರೆ.


​ಶಾಲಾ ಆವರಣದಲ್ಲಿ ನಡೆದ ಈ ಮತದಾನ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹ ಮತ್ತು ಶಿಸ್ತಿನಿಂದ ಪಾಲ್ಗೊಂಡು ತಮ್ಮ ಹಕ್ಕನ್ನು ಚಲಾಯಿಸಿದರು. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಈ ಚುನಾವಣೆಯನ್ನು ಹಮ್ಮಿಕೊಳ್ಳಲಾಗಿತ್ತು.
​ಶಾಲಾ ಮುಖ್ಯ ಶಿಕ್ಷಕಿ ಗ್ರೇಸ್ ಪಿ. ಸಲ್ದಾನಾ ಅವರು ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುನ್ನಡೆಸಿದರು. ಶಾಲೆಯ ಸಹ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಚುನಾವಣಾ ಕರ್ತವ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಹಕರಿಸಿದರು. ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಸತ್ತಿನ ಪದಾಧಿಕಾರಿಗಳಿಗೆ ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿ, ಸುಗಮ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದ್ದಾರೆ.