


ಡೈಲಿವಾರ್ತೆ: 21/ಜೂ./2026


ಕೋಟ: ಕಾರು ಡಿಕ್ಕಿ – ರಸ್ತೆ ದಾಟುತ್ತಿದ್ದ ವ್ಯಕ್ತಿ ದುರ್ಮರಣ

ಕೋಟ: ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಜೂ. 21 ರಂದು ಭಾನುವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸರ್ಕಲ್ ನಲ್ಲಿ ಸಂಭವಿಸಿದೆ.
ಮೃತಪಟ್ಟ ವ್ಯಕ್ತಿ ಬ್ರಹ್ಮಾವರ ಅರೂರು ಮೂಲದ ಸತೀಶ್ ಆಚಾರ್ (45) ಎಂದು ಗುರುತಿಸಲಾಗಿದೆ.
ಘಟನೆ ವಿವರ: ಮೃತ ಸತೀಶ್ ಆಚಾರ್ ಅವರು ಕೋಟದ ಪ್ರಸಿದ್ದ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿಂದ ಹಾಡಿಕೆರೆ ಹೋಗಲೆಂದು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಕುಂದಾಪುರ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರೊಂದು ಅತೀ ವೇಗ ಹಾಗೂ ಅಜಾಗರೂಕತೆ ಚಲಾಯಿಸಿಕೊಂಡು ಬಂದು ಸತೀಶ್ ಆಚಾರ್ ಅವರಿಗೆ ನೇರ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ರಸ್ತೆಗೆ ಎಸೆಯಲ್ಪಟ ಸತೀಶ್ ಅವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಜೀವನ್ ಮಿತ್ರ ಆಂಬುಲೆನ್ಸ್ ನಾಗರಾಜ್ ಪುತ್ರನ್ ಹಾಗೂ ಕಿಶೋರ್ ಶೆಟ್ಟಿ ಅವರು ಸ್ಥಳೀಯರ ಸಹಕಾರದೊಂದಿಗೆ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಸತೀಶ್ ಆಚಾರ್ ಅವರು ಕೊನೆಯುಸಿರೆಳೆದಿದ್ದು, ಪರೀಕ್ಷಿಸಿದ ವೈದ್ಯರು ಆತ ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಕೋಟ ಠಾಣೆ ಪೊಲೀಸರು ಸ್ಥಳಕ್ಕಾಗಿಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.