ಡೈಲಿವಾರ್ತೆ: 23/ಜೂ./2026

ಉದ್ಯಾವರ: ಪಾಪನಾಶಿನಿ ನದಿಗೆ ಹಾರಿ ಪಿತ್ರೋಡಿಯ ಯುವಕ ಆತ್ಮಹತ್ಯೆ – ಮೃತದೇಹ ಪತ್ತೆ!

​ಉಡುಪಿ: ಇಲ್ಲಿನ ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲಿಂದ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ಮಂಗಳವಾರ ಸಂಭವಿಸಿದೆ.

ಮೃತರನ್ನು ಉದ್ಯಾವರ ಪಿತ್ರೋಡಿಯ ನಿವಾಸಿ ಹರ್ಷಿತ್ ಶೆಟ್ಟಿ (28) ಎಂದು ಗುರುತಿಸಲಾಗಿದೆ.

​ಘಟನೆಯ ವಿವರ:
ಮೃತ ಹರ್ಷಿತ್ ಶೆಟ್ಟಿ ಅವರು ಮಲ್ಪೆಯ ಸೊಸೈಟಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಮಂಗಳವಾರ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಬೋಳಾರುಗುಡ್ಡೆ ಮೈದಾನಕ್ಕೆ ಕ್ರಿಕೆಟ್ ಆಡಲು ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಹೊರಟಿದ್ದರು. ಆದರೆ, ಅದಾದ ನಂತರ ಅವರು ಮನೆಗೆ ಮರಳಿ ಬಂದಿರಲಿಲ್ಲ. ಅಷ್ಟೇ ಅಲ್ಲದೆ ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿತ್ತು. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದಾಗ, ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ಅವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು.

​ಈಶ್ವರ್ ಮಲ್ಪೆ ತಂಡದಿಂದ ಶೋಧ ಕಾರ್ಯ:
ಯುವಕ ನದಿಗೆ ಹಾರಿರುವ ಶಂಕೆ ವ್ಯಕ್ತವಾದ ತಕ್ಷಣವೇ ಸ್ಥಳೀಯರು ಮತ್ತು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಜಿಲ್ಲೆಯ ಪ್ರಸಿದ್ಧ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಅವರ ತಂಡ ಮತ್ತು ಸ್ಥಳೀಯ ಈಜುಗಾರರು ನದಿಯಲ್ಲಿ ತೀವ್ರ ಹುಡುಕಾಟ ನಡೆಸಿದ ಪರಿಣಾಮವಾಗಿ, ಕೊನೆಗೂ ಹರ್ಷಿತ್ ಶೆಟ್ಟಿ ಅವರ ಮೃತದೇಹ ಪತ್ತೆಯಾಗಿದೆ.

ಮೃತ ಯುವಕ ರಮೇಶ್ ಶೆಟ್ಟಿ ಮತ್ತು ಪ್ರಮೋದಿನಿ ಶೆಟ್ಟಿ ದಂಪತಿಯ ಪುತ್ರನಾಗಿದ್ದು, ಇಬ್ಬರು ಸಹೋದರರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.