ಡೈಲಿವಾರ್ತೆ: 29/ಜೂ./2026

ಮಾಬುಕಳ: ಬೈಕ್​ಗೆ ಬೊಲೆರೋ ಪಿಕಪ್ ಡಿಕ್ಕಿ – ಸವಾರ ಗಂಭೀರ

ಕೋಟ: ಬೈಕ್​ಗೆ ಬೊಲೆರೋ ಪಿಕಪ್ ಡಿಕ್ಕಿ ಹೊಡೆದು ಬೈಕ್ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಜೂ. 29ರಂದು ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಮಾಬುಕಳ ಸರ್ಕಲ್ ನಲ್ಲಿ ಸಂಭವಿಸಿದೆ.

ಗಂಭೀರ ಗಾಯಗೊಂಡ ಬೈಕ್ ಸವಾರ ಮಾಬುಕಳ ನಿವಾಸಿ ಭಾಸ್ಕರ ಪೂಜಾರಿ ಎಂದು ಗುರುತಿಸಲಾಗಿದೆ.

ಭಾಸ್ಕರ ಪೂಜಾರಿ ಸಾಸ್ತಾನದಿಂದ ಮಾಬುಕಳ ಕಡೆ ಬರುತ್ತಿದ್ದ ವೇಳೆ ಉಡುಪಿ ಕಡೆಯಿಂದ ಅತೀವೇಗ ಹಾಗೂ ಅಜಾಗರೂಕತೆ ಚಲಾಯಿಸಿಕೊಂಡು ಬಂದ ಬೊಲೆರೋ ಪಿಕಪ್ ವಾಹನವು
ಬೈಕ್​ಗೆ ನೇರ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳೀಯರು ಕೂಡಲೇ ಗಾಯಾಳುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಂಬುಲೆನ್ಸ್ ಮೂಲಕ ಬ್ರಹ್ಮಾವರ ಆಸ್ಪತ್ರೆಗೆ ಕಳುಹಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಅಪಘಾತ ಸಂಬಂಧಿಸಿದಂತೆ ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.