


ಡೈಲಿವಾರ್ತೆ: 02/ಜು./2026


ಭಾರೀ ಮಳೆ ಮುನ್ಸೂಚನೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಕರಾವಳಿ ಜಿಲ್ಲೆಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ (ಪಿಯು) ಕಾಲೇಜುಗಳಿಗೆ ನಾಳೆ, ಜುಲೈ 3ರ ಶುಕ್ರವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ.