


ಡೈಲಿವಾರ್ತೆ: 05/ಜು./2026


ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಾಲಿಗ್ರಾಮದ ಸೌಜನ್ ಕುಮಾರ್ ನೇಮಕ

ಉಡುಪಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯನ್ನು ಜಿಲ್ಲೆ ಹಾಗೂ ರಾಜ್ಯಾದ್ಯಂತ ಸಂಘಟನಾತ್ಮಕವಾಗಿ ಬಲಪಡಿಸುವ ಮತ್ತು ಸಕ್ರಿಯಗೊಳಿಸುವ ನಿಟ್ಟಿನಲ್ಲಿ ಮಹತ್ವದ ನೇಮಕಾತಿ ಪ್ರಕ್ರಿಯೆ ನಡೆದಿದೆ.
ಉಡುಪಿಯ ಪ್ರಭಾವಿ ಯುವ ನಾಯಕರಾದ ಸಾಲಿಗ್ರಾಮದ ಸೌಜನ್ ಕುಮಾರ್ ಅವರನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದ್ದು, ಅವರಿಗೆ ಅಧಿಕೃತ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಾಯಿತು.
ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಉದಯ್ ಭಾನು ಚಿಬ್ ಅವರ ನಿರ್ದೇಶನದ ಮೇರೆಗೆ ಹಾಗೂ ಕರ್ನಾಟಕ ಉಸ್ತುವಾರಿಗಳಾದ ಶ್ರೀ ನಿಗಮ್ ಭಂಡಾರಿ ಅವರ ಅನುಮೋದನೆಯೊಂದಿಗೆ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಎಸ್. ಮಂಜುನಾಥ್ ಅವರ ಮೂಲಕ ಈ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯನಿರತ ಅಧ್ಯಕ್ಷರಾದ ಕಿಶನ್ ಹೆಗಡೆ ಕೊಳಕ್ಕೆಬೈಲು, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಅಜಿತ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜೆಗೋಳಿ ಸೇರಿದಂತೆ ಜಿಲ್ಲೆಯ ಪ್ರಮುಖ ಕಾಂಗ್ರೆಸ್ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು, ನೂತನ ಕಾರ್ಯದರ್ಶಿಗೆ ಶುಭ ಹಾರೈಸಿದರು.