ಡೈಲಿವಾರ್ತೆ: 11/ಜು./2026

ಗಾನಕೋಗಿಲೆ, ಕನ್ನಡ ಚಿತ್ರರಂಗದ ಪ್ರಸಿದ್ಧ ಗಾಯಕಿ ಎಸ್. ಜಾನಕಿ ವಿಧಿವಶ!

ಮೈಸೂರು: ಭಾರತದ ಗಾನಕೋಗಿಲೆ, ಕನ್ನಡ ಚಿತ್ರರಂಗದ ಪ್ರಸಿದ್ಧ ಗಾಯಕಿ ಎಸ್. ಜಾನಕಿ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

88 ವರ್ಷ ವಯಸ್ಸಿನ ಜಗಮೆಚ್ಚಿದ ಗಾಯಕಿ ಎಸ್ ಜಾನಕಿ ಅವರು ಮೈಸೂರಿನಲ್ಲಿ ವಾಸವಿದ್ದರು, ಅವರ ಆರೋಗ್ಯವನ್ನು ನವೀನ್ ಎಂಬ ಕೇರ್ ಟೇಕರ್ ನೋಡಿಕೊಳ್ಳುತ್ತಿದ್ದರು. ಇಂದು ಸಂಜೆ ಎಸ್ ಜಾನಕಿ ಅವರಿಗೆ ಇದ್ದಕ್ಕಿದ್ದಂತೆ ಹೃದಯಾಘಾತ ಆಗಿದ್ದು, ತಕ್ಷಣವೇ ಅವರನ್ನು ಮೈಸೂರಿನ ಅಪೋಲೋ ಬಿಜಿಎಸ್‌ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಅವರು ಚಿಕಿತ್ಸೆಗೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.