


ಡೈಲಿವಾರ್ತೆ: 17/ಜು./2026


ಖಾಸಗಿ ಶಾಲಾ ವಾಹನ ಡಿಕ್ಕಿ: 5 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಕಲಬುರಗಿ: ಅಂಬಿಕಾ ನಗರದಲ್ಲಿ ಖಾಸಗಿ ಶಾಲಾ ವಾಹನ ಡಿಕ್ಕಿಯಾಗಿ ಐದು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಮೃತಪಟ್ಟ ಬಾಲಕ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಸಂಬಣ್ಣ ಅವರ ಪುತ್ರ ವೇದಾಂತ(5) ಎಂದು ಗುರುತಿಸಲಾಗಿದೆ.
ಘಟನೆ ವಿವರ: ಕುಟುಂಬದೊಂದಿಗೆ ಮಳಖೇಡ ಗ್ರಾಮದಿಂದ ಅಜ್ಜಿಯ ಮನೆಗೆ ಬಂದಿದ್ದ ವೇದಾಂತ ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಶಾಲಾ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತಲೆಗೆ ಗಂಭೀರ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.
ಅಪಘಾತದ ಬಳಿಕ ವಾಹನ ಚಾಲಕ ಪರಾರಿಯಾಗಿದ್ದು
ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕಲಬುರುಗಿ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಲ್ಲದೆ ಪರಾರಿಯಾಗಿದ್ದ ವಾಹನ ಚಾಲಕನ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.