


ಡೈಲಿವಾರ್ತೆ: 21/ಜು./2026


ವಿದ್ಯಾರ್ಥಿಗಳನ್ನು ಥಳಿಸುವುದು ಪ್ರಜಾಪ್ರಭುತ್ತಕ್ಕೆ ಕಪ್ಪು ಚುಕ್ಕೆ – ಮೋದಿ ಕ್ಷಮೆಯಾಜಿಸಿ ರಾಜೀನಾಮೆ ನೀಡಲಿ ರಾಹುಲ್ ಗಾಂಧಿ

ನವದೆಹಲಿ: ನೀಟ್(NEE) ಪರೀಕ್ಷಾ ಅಕ್ರಮ ಹಾಗೂ ಪೇಪರ್ ಲೀಕ್ ಖಂಡಿಸಿ, ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂಸತ್ ಚಲೊ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿ ಚಾರ್ಜ್ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಕುರಿತು ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿಯವರು ವಿದ್ಯಾರ್ಥಿಗಳನ್ನು ಥಳಿಸುವುದು ಪ್ರಜಾಪ್ರಭುತ್ವಕ್ಕೆ ಇದು ಕಪ್ಪು ಚುಕ್ಕಿಯಾಗಿದೆ. ಪ್ರಧಾನಿ ಮೋದಿ ಅವರು ದೇಶದ ವಿದ್ಯಾರ್ಥಿಗಳಲ್ಲಿ ತಕ್ಷಣ ಕ್ಷಮೆಯಾಚಿಸಬೇಕು ಮತ್ತು ಗ್ರಹ ಸಚಿವ ಅಮಿತ್ ಶಾ ಅವರೊಂದಿಗೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಭಾರತೀಯ ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧವಾದ ನಡೆ ಎಂದು ಟೀಕಿಸಿದರು. ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆಯ ವೈಫಲ್ಯದ ವಿರುದ್ಧ ವಿದ್ಯಾರ್ಥಿಗಳು ತಮ್ಮ ಹಕ್ಕಿಗಾಗಿ ಧ್ವನಿ ಎತ್ತುತ್ತಿರುವಾಗ ಅವರನ್ನು ಬಲಪ್ರಯೋಗದಿಂದ ಹತ್ತಿಕ್ಕುವುದು ಖಂಡನೀಯ ಎಂದು ಹೇಳಿದರು.
ಈ ವಿಚಾರದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ್ದಾಗಿ ತಿಳಿಸಿದ ರಾಹುಲ್ ಈ ವಿಷಯದ ಬಗ್ಗೆ ಚರ್ಚಿಸಲು ಸರಕಾರದ ಅನುಮತಿ ಪಡೆಯಬೇಕಿದೆ ಎಂದು ಸ್ಪೀಕರ್ ಹೇಳಿದ್ದಾರೆ ಎಂದ ಅವರು ಅಂದರೆ ಸಂಸತ್ತಿನಲ್ಲಿ ಮಹತ್ವದ ಸಾರ್ವಜನಿಕ ವಿಷಯದ ಚರ್ಚೆಗೂ ಸರಕಾರದ ಅನುಮತಿ ಬೇಕೇ ಎಂದು ಪ್ರಶ್ನಿಸಿದರು.?
ದೇಶದ ಶಿಕ್ಷಣ ಮತ್ತು ಪರೀಕ್ಷೆ ವ್ಯವಸ್ಥೆಯ ವೈಫಲ್ಯವನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆಸುತ್ತಿದ್ದಾರೆ ದೇಶದ ಶಿಕ್ಷಣ ಕುಸಿದು ಹೋಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಪರೀಕ್ಷಾ ವ್ಯವಸ್ಥೆಗಳನ್ನು ಗೆದ್ದಲುಗಳು ತಿಂದಂತಾಗಿದೆ ವಿದ್ಯಾರ್ಥಿಗಳು ಇದೇ ವಿಷಯವನ್ನು ಹೇಳುತ್ತಿದ್ದಾರೆ ಅದರಲ್ಲಿ ತಪ್ಪೇನಿದೆ ಎಂದು ಕೇಳಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರತಿಪಕ್ಷಗಳ ಆಗ್ರಹ ಕುರಿತು ಕೇಳಿದ ಪ್ರಶ್ನೆ ಉತ್ತರಿಸಿ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಆದರೆ ವಿದ್ಯಾರ್ಥಿಗಳನ್ನು ಥಳಿಸಿದ್ದು ಅವರಲ್ಲ ಗ್ರಹ ಸಚಿವ ಅಮಿತ್ ಶಾ ಆದ್ದರಿಂದ ಅವರು ರಾಜೀನಾಮೆ ನೀಡಬೇಕು. ಗ್ರಹಸಚಿವರು ಪ್ರಧಾನಿಗೆ ವರದಿ ಮಾಡುತ್ತಾರೆ ಹೀಗಾಗಿ ಪ್ರಧಾನಿ ಮೋದಿಯೂ ಕೂಡ ರಾಜೀನಾಮೆ ನೀಡಬೇಕೆಂದು ಹೇಳಿದರು.
ಶಿಕ್ಷಣ ಸಚಿವ ದೇವೇಂದ್ರ ಪ್ರದಾನ್ ರಾಜೀನಾಮೆಗೆ ಅಗ್ರಹಿಸಿ ಸೋಮವಾರ ಮುಂಗಾರು ಅಧಿವೇಶನ ಮೊದಲ ದಿನ ಸಾವಿರಾರು ಪ್ರತಿಭಟನಾಕಾರರು ಸಂಸತ್ ಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ಹಾಗೂ ಅಶ್ರುವಾಯು ಪ್ರಯೋಗಿಸಿ ಗುಂಪನ್ನು ಗುಂಪನ್ನು ಚದುರಿಸಿದರು.