ಡೈಲಿವಾರ್ತೆ: 24/ಜು./2026

ಜುಲೈ 26 ರಂದು ಕೋಟ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಜಿ. ತಿಮ್ಮ ಪೂಜಾರಿ ಪದಪ್ರದಾನ ಸಮಾರಂಭ

ಕೋಟ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಜಿ. ತಿಮ್ಮ ಪೂಜಾರಿ ಅವರ ಪದಪ್ರದಾನ ಸಮಾರಂಭವು ಜುಲೈ 26, 2026ರ ಭಾನುವಾರದಂದು ಬೆಳಿಗ್ಗೆ 10.00 ಗಂಟೆಗೆ ಸಾಲಿಗ್ರಾಮದ ಚೇಂಪಿಯಲ್ಲಿರುವ ವಿಶ್ವಕರ್ಮ ಸಭಾಭವನದಲ್ಲಿ ಜರುಗಲಿದೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರು ಉದ್ಘಾಟಿಸಲಿದ್ದಾರೆ. ಬ್ಲಾಕ್ ಕಾಂಗ್ರೆಸ್ ಸಮಿತಿ ಕೋಟ ಇದರ ಅಧ್ಯಕ್ಷರಾದ ಶಂಕರ್ ಕುಂದರ್ ಉಪಸ್ಥಿತರಿರಲಿದ್ದಾರೆ.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ, ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ ಕುಮಾರ್ ಸೊರಕೆ, ಮಾಜಿ ಸಚಿವರಾದ ಕೆ. ಜಯಪ್ರಕಾಶ್ ಹೆಗ್ಡೆ, ಕೆ.ಪಿ.ಸಿ.ಸಿ. ಉಪಾಧ್ಯಕ್ಷರಾದ ಐವನ್ ಡಿಸೋಜ ಹಾಗೂ ಎಂ. ಎ. ಗಫೂರ್, ಕೆ.ಪಿ.ಸಿ.ಸಿ. ವಕ್ತಾರರಾದ ಸುಧೀರ್ ಕುಮಾರ್ ಮರೋಳಿ, ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಸೇರಿದಂತೆ ಪ್ರಮುಖ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ.
ಅಲ್ಲದೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಹೆಬ್ಬಾರ್, ಮೀನುಗಾರರ ಸಹಕಾರಿ ಸಂಘ ಬೀಜಾಡಿಯ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ನಾರಾಯಣಗುರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ ಪೂಜಾರಿ ಹಾಗೂ ಅನೇಕ ಪ್ರಮುಖ ಮುಖಂಡರು ಅತಿಥಿಗಳಾಗಿ ಆಗಮಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಗೌರವ ಉಪಸ್ಥಿತರಿರಲಿದ್ದು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳು ವಿನಂತಿಸಿದ್ದಾರೆ.