ಡೈಲಿವಾರ್ತೆ: 24/ಜು./2026

ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ – ಜು. 25 ರಂದು ಶಾಲಾ ಕಾಲೇಜ್‌ಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ಅರೆಂಜ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು 25(ಶನಿವಾರ) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢ ಶಾಲಾ, ಪದವಿ ಪೂರ್ವ, ಡಿಪ್ಲೊಮಾ, ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.