ಡೈಲಿವಾರ್ತೆ:16/ಆಗಸ್ಟ್ /2026

ನಾಗರಪಂಚಮಿ ಪ್ರಯುಕ್ತ ಆ. 17 ರಂದು
ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ನಾಗರಪಂಚಮಿ ಪ್ರಯುಕ್ತ ನಾಳೆ (ಆಗಸ್ಟ್ 17) ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.