ಡೈಲಿವಾರ್ತೆ:19/ಆಗಸ್ಟ್ /2026

ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಮೂವರು ಯುವಕರು ನಾಪತ್ತೆ

ವಿಜಯನಗರ: ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಮೂವರು ಯುವಕರು ಏಕಾಏಕಿ ನಾಪತ್ತೆ ಆಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದ ಬಳಿ ನಡೆದಿದೆ.

ನಾಪತ್ತೆಯಾದ ಯುವಕರನ್ನು ರಾಜ (22), ಯಮನಪ್ಪ (20) ಹಾಗೂ ಅಜ್ಜಪ್ಪ (26) ಎಂದು ಗುರುತಿಸಲಾಗಿದೆ.
ಈ ಮೂವರು ಯುವಕರು ಮಂಗಳವಾರ ಮಧ್ಯಾಹ್ನ ತುಂಗಭದ್ರಾ ನದಿಯ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ.
ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡಿದ್ದಾರೆ.
ಬಳಿಕ ಮೂವರು ನಾಪತ್ತೆಯಾಗಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ಶೋಧ ಕಾರ್ಯ ಆರಂಭಿಸಿದ್ದಾರೆ. ಸದ್ಯ ಎಸ್‌ಡಿಆರ್‌ಎಫ್ ತಂಡವೂ ತುಂಗಭದ್ರಾ ನದಿ ಹಿನ್ನೀರಿನಲ್ಲಿ ಶೋಧ ಕಾರ್ಯ ಮುಂದುವರಿಸಿದೆ.

ಹಗರಿಬೊಮ್ಮನಹಳ್ಳಿ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿ ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ತಂಬ್ರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.