


ಡೈಲಿವಾರ್ತೆ:20/ಆಗಸ್ಟ್ /2026

ಬ್ರಹ್ಮಾವರ: ಚಲಿಸುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿ – ಪ್ರಯಾಣಿಕರು ಪಾರು!

ಬ್ರಹ್ಮಾವರ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಶ್ರೀ ದುರ್ಗಾಂಬ ಹೆಸರಿನ ಖಾಸಗಿ ಬಸ್ಸೊಂದು ಏಕಾಏಕಿ ಬೆಂಕಿಗಾಹುತಿಯಾದ ಘಟನೆ ಗುರುವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ಸಮೀಪ ಸಂಭವಿಸಿದೆ.

ಬಸ್ಸಿನ ಇಡಿಸಿ ಬಾಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಎಚ್ಚೆತ್ತ ನಿರ್ವಾಹಕರು ಬಸ್ಸನ್ನು ನಿಲ್ಲಿಸಿ, ಬಸ್ಸಿನಲ್ಲಿದ್ದ ಏಳು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ನಿರ್ವಾಹಕರ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ.
ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯಿಂದ ಬಸ್ಸಿಗೆ ಹಾನಿಯಾಗಿದ್ದು, ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.