


ಡೈಲಿವಾರ್ತೆ:21/ಆಗಸ್ಟ್ /2026

ಕುಂದಾಪುರ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆಗೈದ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು

ಕುಂದಾಪುರ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.

ಡಾ. ಮಹೇಂದ್ರ ಕುಮಾರ್ ಶೆಟ್ಟಿ ಆಗಸ್ಟ್ 21ರಂದು ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರು ಹೋಟೆಲ್‌ನಲ್ಲಿ ಇದ್ದ ಸಂದರ್ಭದಲ್ಲಿ ಏಕಾಏಕಿ ಹಲ್ಲೆ ನಡೆಸಿರುವ ದೃಶ್ಯಗಳು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದವು.
ಈ ಕುರಿತು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ನೀಡಿದ ವರದಿಯನ್ನು ಆಧರಿಸಿ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರ ವರ್ತನೆಯು ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯದ್ದಾಗಿದೆ ಎಂದು ಪರಿಗಣಿಸಲಾಗಿದೆ.
ಕರ್ತವ್ಯಲೋಪ ಮತ್ತು ಬೇಜವಾಬ್ದಾರಿತನದ ಆರೋಪಗಳಿಗೆ ಸಂಬಂಧಿಸಿದ ಇಲಾಖಾ ವಿಚಾರಣೆ ಬಾಕಿ ಇರಿಸಿ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.