


ಡೈಲಿವಾರ್ತೆ:24/ಆಗಸ್ಟ್ /2026

ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸಿದ ಕೃತ್ಯ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆ

ಬ್ರಹ್ಮಾವರ: ಬ್ರಹ್ಮಾವರದ ಬೈಕಾಡಿ ಗಾಂಧಿನಗರದಲ್ಲಿ ಪುತ್ರನೋರ್ವ ತನ್ನ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಆಘಾತಕಾರಿ ಘಟನೆ ನಡೆದಿದೆ.
ಆರೋಪಿ ಶಾಹಿದ್ ಆಲಿ (31) ಎಂದು ತಿಳಿದು ಬಂದಿದೆ.
ಈತ ತನ್ನ ತಂದೆ, ತಾಯಿಯನ್ನು ಕೊಲೆ ಮಾಡಿದ್ದಾನೆ.
ಕಳೆದ ರಾತ್ರಿ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ತಂದೆ-ತಾಯಿ ಹಾಗೂ ಪುತ್ರನ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಶಾಹಿದ್ ಆಲಿ ಸುತ್ತಿಗೆಯಿಂದ ಹೆತ್ತವರ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ತೀವ್ರವಾಗಿ ಗಾಯಗೊಂಡಿದ್ದ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಘಟನೆ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಶಾಹಿದ್ ಆಲಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆಗೆ ಕಾರಣ, ಘಟನೆಯ ಸಂಪೂರ್ಣ ವಿವರ ಹಾಗೂ ಇತರ ಮಾಹಿತಿಗಳು ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.