ಡೈಲಿವಾರ್ತೆ:24/ಆಗಸ್ಟ್ /2026

ಆ. 25ರಂದು ದ.ಕ., ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ರಜೆ ಘೋಷಣೆ

ಮಂಗಳೂರು/ಉಡುಪಿ: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 25ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸುವ ಈದ್ ಮಿಲಾದ್ ಹಬ್ಬವು ಆಗಸ್ಟ್ 25ರಂದು ನಡೆಯಲಿದೆ. ರಾಜ್ಯದ ರಜೆ ಪಟ್ಟಿಯಲ್ಲಿ ಆಗಸ್ಟ್ 26ರಂದು ಈದ್ ಮಿಲಾದ್ ರಜೆ ಉಲ್ಲೇಖವಾಗಿದ್ದರೂ, ಹಬ್ಬದ ಆಚರಣೆ ಆಗಸ್ಟ್ 25ರಂದು ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಂದು ದಿನ ಮುಂಚಿತವಾಗಿ ರಜೆ ಘೋಷಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಆಗಸ್ಟ್ 25ರಂದು ಎರಡೂ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ