ಡೈಲಿವಾರ್ತೆ:24/ಆಗಸ್ಟ್ /2026

ಚಿಕ್ಕಮಗಳೂರಿನಲ್ಲಿ 40 ಆಡಿ ಟಿಪ್ಪು ಸುಲ್ತಾನ್ ಕಟೌಟ್‌ ವಿವಾದ: ಪಾಕಿಸ್ತಾನ ಹಾಗೂ ಮುಜಾಹಿದ್‌ಗಳಿಗೆ ಸಂಬಂಧಿಸಿದ ಹಾಡು ಬಳಕೆ ಆರೋಪ: ಪ್ರಕರಣ ದಾಖಲು

ಚಿಕ್ಕಮಗಳೂರು: ಆಗಸ್ಟ್ 25ರಂದು ಈದ್-ಎ-ಮಿಲಾದ್ ಹಬ್ಬ ಆಚರಣೆಯಾಗಲಿದ್ದು, ಅದರ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಸುಮಾರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿದೆ.

ಆದರೆ ನಗರದಲ್ಲಿ ಅಳವಡಿಸಲಾದ 40 ಅಡಿ ಎತ್ತರದ ಟಿಪ್ಪು ಸುಲ್ತಾನ್‌ ಕಟೌಟ್‌ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಈ ವಿಡಿಯೋದಲ್ಲಿ ಪಾಕಿಸ್ತಾನ ಮತ್ತು ಮುಜಾಹಿದ್‌ ಗಳಿಗೆ ಸಂಬಂಧಿಸಿದ ಹಾಡಿನ ಸಾಹಿತ್ಯವನ್ನು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು.

ಇದು ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್ ಹೆಸರಿನ ಖಾತೆಯಿಂದ 40 ಅಡಿ ಎತ್ತರದ ಟಿಪ್ಪು ಸುಲ್ತಾನ್‌ ಕಟೌಟ್‌ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ ಎನ್ನಲಾಗಿದ್ದು ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಡಿಯೋ ಮೂಲ ಹಾಗೂ ಅದನ್ನು ಸೃಷ್ಟಿಸಿ ಹಂಚಿಕೊಂಡವರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆಗೆ ಸ್ಥಳೀಯ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮಾಜಿಕ ಶಾಂತಿ ಹಾಗೂ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.

ಪ್ರಕರಣದ ವಾಸ್ತವಾಂಶ ಪರಿಶೀಲಿಸಿದ ಬಳಿಕ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.