


ಡೈಲಿವಾರ್ತೆ:30/ಆಗಸ್ಟ್ /2026

ರೋಟರಿ ಹಂಗಾರಕಟ್ಟೆ ಸಾಸ್ತಾನದ ವತಿಯಿಂದ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಕೋಟ: ಪ್ರಾಥಮಿಕ ಆರೋಗ್ಯ ಕೇಂದ್ರ ಕೋಡಿ ಬೆಂಗ್ರೆ, ಗ್ರಾಮ ಪಂಚಾಯತ್ ಕೋಡಿ ಇವರ ವತಿಯಿಂದ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಇವರ ಪ್ರಾಯೋಜಕತ್ವದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿ ಕನ್ಯಾಣ ಇಲ್ಲಿ ಇತ್ತೀಚೆಗೆ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜರುಗಿತು.

ಡಿಪಾರ್ಟ್ಮೆಂಟ್ ಆಫ್ ಕಮ್ಯುನಿಟಿ ಮೆಡಿಸಿನ್ ಕಸ್ತೂರಬಾ ಆಸ್ಪತ್ರೆ ಮಣಿಪಾಲ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಉಡುಪಿ ಇವರ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಶಿಬಿರವನ್ನು ರೋಟರಿ ಅಧ್ಯಕ್ಷೆ ರೊ. ಕುಸುಮಾ ಮನೋಜ್ ಉದ್ಘಾಟಿಸಿ ಶುಭ ಹಾರೈಸಿದರು.
ಪ್ರಾ.ಆ. ಕೇಂದ್ರ ಸಾಸ್ತಾನ ಇಲ್ಲಿನ ವೈದ್ಯಾಧಿಕಾರಿ
ಡಾ. ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಿದ್ದರು. ಪ್ರಾ. ಆ. ಕೇಂದ್ರ ಕೋಡಿ ಬೆಂಗ್ರೆ ಇಲ್ಲಿನ ವೈದ್ಯಾಧಿಕಾರಿ
ಡಾ ಶಮಾ ಶುಕೂರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಡಾ. ರಾಘವೇಂದ್ರ ರಾವ್ ರವರು ಮಾತನಾಡಿ ಪ್ರತಿ ಯೊಬ್ಬರೂ ವಷ೯ಕ್ಕೊಮ್ಮೆ ಸಮಗ್ರ ಆರೋಗ್ಯ ತಪಾಸಣೆ ಮಾಡಿ ಕೊಳ್ಳಬೇಕು.ಇದರಿಂದ ಆರಂಭಿಕ ಹಂತದಲ್ಲಿ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಬಹುದು ಎಂದು ಅಭಿಪ್ರಾಯಪಟ್ಟರು.
ಗ್ರಾಮ ಪಂಚಾಯತ್ ಕೋಡಿ ಇದರ ಕಾರ್ಯದರ್ಶಿ ಶ್ರೀ ಕೆ ಉಮೇಶ್, ಕೆ.ಎಂ. ಸಿ. ಮಣಿಪಾಲದ ವೈದ್ಯೆ ಡಾ. ಸಂಜನಾ ಹೆಗ್ಡೆ, ಪ್ರಸಾದ್ ನೇತ್ರಾಲಯದ ಡಾ.ದೀಪಿಕಾ, ಕೋಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ
ಶ್ರೀ ಪ್ರಭಾಕರ ಮೆಂಡನ್ , ಈವೆಂಟ್ ಚೇರ್ಮನ್ ಪ್ರತಾಪ್ ಖಾವಿ೯ ಹಾಗೂ ರೋಟರಿ ಸದಸ್ಯರು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ರೋಟರಿ ಕಾರ್ಯದರ್ಶಿ ರೊ ಕೆ. ರಾಜಾರಾಮ ಐತಾಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು