


ಡೈಲಿವಾರ್ತೆ:31/ಆಗಸ್ಟ್ /2026

ಶಿವಮೊಗ್ಗ: ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ನೇಣಿಗೆ ಶರಣು

ಶಿವಮೊಗ್ಗ: ಡೆತ್‌ನೋಟ್ ಬರೆದಿಟ್ಟು 9ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ. 30 ರಂದು ಭಾನುವಾರ ನಗರದ ಗೋಪಿಸೆಟ್ಟಿ ಕೊಪ್ಪದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಸೃಷ್ಟಿ (15) ಎಂದು ಗುರುತಿಸಲಾಗಿದೆ. ಈಕೆ ನಗರದ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.
ಭಾನುವಾರ ಸೃಷ್ಟಿಯ ತಂದೆ,ತಾಯಿ ಇಬ್ಬರೂ ಮಗಳನ್ನು ಮನೆಯಲ್ಲೇ ಬಿಟ್ಟು ರಾಯರ ಆರಾಧನೆ ಕಾರ್ಯಕ್ರಮಕ್ಕೆ ತೆರಳಿದ್ದರು. ಪೂಜೆ ಮುಗಿಸಿ ಮನೆಗೆ ಹಿಂದಿರುಗಿದ ವೇಳೆ ಸೃಷ್ಟಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಪೋಷಕರು ಪದೇಪದೆ ಓದಿನ ಕುರಿತು ಹೇಳುತ್ತಿದ್ದ ವಿಚಾರದಿಂದ ಮನನೊಂದು ಈ ನಿರ್ಧಾರಕ್ಕೆ ಬಂದಿರಬಹುದೆಂಬುದು ಪ್ರಾಥಮಿಕ ಮಾಹಿತಿಯಿಂದ ಮೇಲ್ನೋಟಕ್ಕೆ ತಿಳಿದುಬಂದಿದೆ.
ಆದರೆ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ.
ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.