ಡೈಲಿವಾರ್ತೆ:01/ಸೆ./2026

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ದಾವಣಗೆರೆ ಮೂಲದ ಮೂವರು ಯುವಕರು ಮೃತ್ಯು!

ಧಾರವಾಡ:ಚಾಲಕನ ನಿಯಂತ್ರಣ ತಪ್ಪಿ
ಕಾರೊಂದು ಪಲ್ಟಿಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಭವಿಸಿದೆ.

ಮೃತರನ್ನು ದಾವಣಗೆರೆ ಮೂಲದ ವಿನಾಯಕ ಕೆ.ಯು.(25), ಮಂಜುನಾಥ್ (29) ಹಾಗೂ ಬಸವರಾಜ (34) ಎಂದು ಗುರುತಿಸಲಾಗಿದೆ. ಇನ್ನು ಗಂಭೀರ ಗಾಯಗೊಂಡ ಧಾರವಾಡ ಯಲಿಗಾರ ಓಣಿಯ ಬಸನಗೌಡ ಯಲ್ಲಪ್ಪಗೌಡ ಪಾಟೀಲ್ (26), ದಾವಣಗೆರೆಯ ಅಭಿಷೇಕ್ ಕೆ ಆರ್ (30) ಮತ್ತು ಅಜಯ್ (26) ಎಂಬ ಮೂವರನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗಾವಿ‌ ಕಡೆಯಿಂದ ಧಾರವಾಡಕ್ಕೆ ಬರುತ್ತಿರುವ ವೇಳೆ ಮುಂದಿದ್ದ ವಾಹನ ಡಿಕ್ಕಿ ತಪ್ಪಿಸಲು ಹೋಗಿ ಡಿವೈಡರ್ಗೆ ಗುದ್ದಿ ಕಾರ್ ಪಲ್ಟಿ ಹೊಡೆದಿದೆ. ಇದರ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.