


ಡೈಲಿವಾರ್ತೆ:04/ಸೆ./2026

ಪಡುಬಿದ್ರಿ: ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ – ಯುವಕ ದುರ್ಮರಣ

ಉಡುಪಿ: ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂದಿನಿಂದ ಸ್ಕೂಟರ್ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ರಾಜ್ಯ ಹೆದ್ದಾರಿಯ ನಂದಿಕೂರಿನ ಕಾರ್ಕಳ-ಪಡುಬಿದ್ರಿ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತಪಟ್ಟ ಯುವಕ ಮಂಜುನಾಥ ಬೈಲಪ್ಪ ಮುರಗಾಲಿ (21) ಎಂದು ಗುರುತಿಸಲಾಗಿದೆ.
ಈತ ಮೂಲತಃ ರಾಯದುರ್ಗದವರಾಗಿದ್ದು, ಸುರತ್ಕಲ್‌ನ ಕೋಡಿಕರೆ ಪರಿಸರದಲ್ಲಿ ವಾಸವಾಗಿದ್ದರು.
ಇವರು ರಾತ್ರಿ ಕಾರ್ಕಳ ಕಡೆಯಿಂದ ಸುರತ್ಕಲ್ ಕಡೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ನಂದಿಕೂರಿನ ಕಾರ್ಕಳ-ಪಡುಬಿದ್ರಿ ಬಸ್ ನಿಲ್ದಾಣದ ಸಮೀಪ ರಾಜ್ಯ ಹೆದ್ದಾರಿಯಲ್ಲಿ
ಪಾರ್ಕಿಂಗ್ ಲೈಟ್, ಇಂಡಿಕೇಟರ್ ಅಥವ ಯಾವುದೇ ಸೂಚನಾ ಫಲಕ ಅಳವಡಿಸದೆ ಲಾರಿಯನ್ನು ಹೆದ್ದಾರಿಯಲ್ಲಿ ನಿಲ್ಲಿಸಲಾಗಿತ್ತು.
ಮಂಜುನಾಥ್ ಅವರಿಗೆ ಕತ್ತಲಿನಲ್ಲಿ ಲಾರಿ ಗಮನಕ್ಕೆ ಬಾರದೆ ಸ್ಕೂಟರ್ ಲಾರಿ ಹಿಂಭಾಗಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ.
ಅಪಘಾತದಿಂದ ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
ಮಂಜುನಾಥ್ ಅವರು ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದು ಒಂದು ವರ್ಷದ ಹಿಂದೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮುಂಬರುವ ನವೆಂಬರ್‌ನಲ್ಲಿ ಅವರ ವಿವಾಹ ನಡೆಯಬೇಕಿತ್ತು ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.