


ಡೈಲಿವಾರ್ತೆ:11/ಸೆ./2026

ಮಲ್ಪೆ ಕಡಲಿನಲ್ಲಿ ದುರಂತ: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಕಣ್ಮರೆ

ಮಲ್ಪೆ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುವ ಘಟನೆ ಅರಬ್ಬಿ ಸಮುದ್ರದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಅಶೋಕ (42) ನಾಪತ್ತೆಯಾಗಿರುವ ಮೀನುಗಾರ. ಅವರು ಜಯಗಣೇಶ್ ಎಂಬ ಮೀನುಗಾರಿಕಾ ಬೋಟಿನಲ್ಲಿ ಮಲ್ಪೆಯಿಂದ ಕಾಪು ಕಡೆಗೆ ತೆರಳಿದ್ದರು.
ರಾತ್ರಿ ವೇಳೆ ಬೋಟಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಅಶೋಕ್ ಅವರು ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಬೋಟಿನಲ್ಲಿದ್ದವರು ತಕ್ಷಣ ಹುಡುಕಾಟ ನಡೆಸಿದರೂ ಅವರು ಪತ್ತೆಯಾಗಿಲ್ಲ.
ಘಟನೆಯ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಮೀನುಗಾರನ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.