ಡೈಲಿವಾರ್ತೆ:11/ಸೆ./2026

ವಾಲಿಬಾಲ್‌ನಲ್ಲಿ ಎಕ್ಸಲೆಂಟ್‌ ಕುಂದಾಪುರಕ್ಕೆ ಜಿಲ್ಲಾಮಟ್ಟದ ಕಿರೀಟ: ರಾಜ್ಯಮಟ್ಟದ ಪಂದ್ಯಾಟಕ್ಕೆ ವಿದ್ಯಾರ್ಥಿಗಳ ಆಯ್ಕೆ!

ಕುಂದಾಪುರ: ಎಕ್ಸಲೆಂಟ್ ವಿದ್ಯಾಸಂಸ್ಥೆಯು ಕೇವಲ ಶಿಕ್ಷಣಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದದ್ದಲ್ಲದೆ, ಸಾಂಸ್ಕೃತಿಕ ಹಾಗೂ ಕ್ರೀಡಾಕ್ಷೇತ್ರದಲ್ಲೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ತನ್ನ ಹಿರಿಮೆಯ ಛಾಪನ್ನು ಮೂಡಿಸಿ ಅದೆಷ್ಟೊ ಪ್ರಶಸ್ತಿಗಳನ್ನು ತನ್ನ ಮೂಡಿಗೇರಿಸಿಕೊಂಡಿದೆ.

ಅಂತಹ ಸಾಧನೆಗಳ ಹಾದಿಯ ದಾಖಲೆಗಳ ಸರಮಾಲೆಗಳ ಗರಿಯತ್ತ ಸಾಗುತ್ತಾ, ಸೆ. 11 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಸೈಂಟ್ ಜೋನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜು, ಶಂಕರಪುರ ಇವರ ಸಹಭಾಗಿತ್ವದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕುಂದಾಪುರ ವಲಯವು, ಉಡುಪಿ ಜಿಲ್ಲಾ ಮಟ್ಟದಲ್ಲಿ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಮುಂದೆ ನಡೆಯುವ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಆಯ್ಕೆಗೊಂಡಿರುತ್ತಾರೆ.

ನಮ್ಮ ಎಕ್ಸಲೆಂಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆ ಹಾಗೂ ಸಂತಸದ ವಿಷಯವಾಗಿದೆ. ಈ ನಮ್ಮ ಸಂಸ್ಥೆಯ ಹೆಮ್ಮೆಯ ವಾಲಿಬಾಲ್ ಆಟಗಾರರಾದ ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿರುವುದರ ಜೊತೆಗೆ ರಾಜ್ಯಮಟ್ಟದಲ್ಲಿಯೂ ಸಾಧನೆಯನ್ನು ಮಾಡಿ ಆಯ್ಕೆಗೊಳ್ಳುವಂತೆ ಹಾರೈಸಿದ್ದಾರೆ.