ಡೈಲಿವಾರ್ತೆ:15/ಸೆ./2026

ಲಯನ್ಸ್ ಕ್ಲಬ್ ಕುಂದಾಪುರ ವೇಯ್ಟ್ ಝೋನ್ ಹಾಗೂ ಜೆಸಿಐ ಕುಂದಾಪುರ ಸಿಟಿ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ: ವಿವಿಧ ಸ್ಪರ್ಧೆಗಳ ಆಯೋಜನೆ

ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ ವೇಯ್ಟ್ ಝೋನ್ ಹಾಗೂ ಜೆಸಿಐ ಕುಂದಾಪುರ ಸಿಟಿ ವತಿಯಿಂದ ಇಂಜಿನಿಯರ್ಸ್ ಡೇ ಅಂಗವಾಗಿ ಸೆ.15ರಂದು ಮಂಗಳವಾರ ಸಂಜೆ 5.30ಕ್ಕೆ ಕುಂದಾಪುರದ ಜೆಸಿಐ ಕುಂದಾಪುರ ಸಿಟಿ ಸಭಾಂಗಣದಲ್ಲಿ ವಿವಿಧ ಕಾರ್ಯಕ್ರಮಗಳು ನಡೆದವು

ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಡಿಸ್ಟ್ರಿಕ್ಟ್ 317Cಯ ಸೆಕೆಂಡ್ ವೈಸ್ ಡಿಸ್ಟ್ರಿಕ್ಟ್ ಗವರ್ನರ್ (VDG) Ln. Er ರಮಾನಂದ PMJF ಉದ್ಘಾಟಿಸಿದರು.
ಅವರು ಮಾತನಾಡಿ ಯುವಜನರಲ್ಲಿ ಪ್ರತಿಭೆ, ನಾಯಕತ್ವ ಹಾಗೂ ಸಮಾಜಮುಖಿ ಚಿಂತನೆ ಬೆಳೆಸುವ ನಿಟ್ಟಿನಲ್ಲಿ ಜೆಸಿಐ ಸಂಸ್ಥೆ ಕಳೆದ 21 ವರ್ಷಗಳಿಂದ ನಿರಂತರವಾಗಿ ವಿವಿಧ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಇಂಜಿನಿಯರ್ ಲಯನ್ ರಮಾನಂದ್ ಹೇಳಿದರು.

ಯುವಕರನ್ನು ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆಸುವ ಉದ್ದೇಶದಿಂದ ಜೆಸಿಐ ಸಂಸ್ಥೆ ಹಲವು ವರ್ಷಗಳಿಂದ ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಯುವಜನರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶ ಕಲ್ಪಿಸುವುದರ ಜೊತೆಗೆ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಹಾಗೂ ಸೇವಾ ಮನೋಭಾವ ಬೆಳೆಸುವ ಕಾರ್ಯವನ್ನು ಸಂಸ್ಥೆ ಮಾಡುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮಕ್ಕೆ ಅನಿರೀಕ್ಷಿತವಾಗಿ ಆಹ್ವಾನ ದೊರೆತರೂ, ಜೆಸಿಐ ಸಂಸ್ಥೆಯ ನಿರಂತರ ಸೇವಾ ಚಟುವಟಿಕೆಗಳು ಹಾಗೂ 21 ವರ್ಷಗಳ ಯಶಸ್ವಿ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಭಾಗವಹಿಸಲು ಸಂತೋಷವಾಗಿದೆ ಎಂದು ರಮಾನಂದ್ ಹೇಳಿದರು.
ಇಂಜಿನಿಯರ್ಸ್ ಡೇ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿರುವುದು ಯುವಕರು ಹಾಗೂ ಮಕ್ಕಳಲ್ಲಿ ಸೃಜನಶೀಲತೆ ಮತ್ತು ಪ್ರತಿಭೆಯನ್ನು ಉತ್ತೇಜಿಸುವ ಉತ್ತಮ ಪ್ರಯತ್ನವಾಗಿದೆ. ಇಂತಹ ಕಾರ್ಯಕ್ರಮಗಳು ಮುಂದೆಯೂ ನಿರಂತರವಾಗಿ ನಡೆಯಲಿ ಎಂದು ಅವರು ಆಶಿಸಿದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಕುಂದಾಪುರ ವೇಯ್ಟ್ ಝೋನ್ ಅಧ್ಯಕ್ಷ ಇಂಜಿನಿಯರ್ ಲಯನ್ ಡಾ. ರಮಾನಂದ ಕುಂದಾಪುರ ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾದ ಲಯನ್ ರೋಹನ್ ಡಿ’ಕೋಸ್ಟಾ ಮಾತನಾಡಿ ಜೆಸಿ ಸಪ್ತಾಹದ ಅಂಗವಾಗಿ ಯುವಜನರು ಹಾಗೂ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಲಯನ್ಸ್ ಕ್ಲಬ್ ಕುಂದಾಪುರ ವೆಸ್ಟ್ ಝೋನ್ ವತಿಯಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿರುವುದು ಉತ್ತಮ ಪ್ರಯತ್ನವಾಗಿದೆ.
ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ಲಯನ್ಸ್ ಹಾಗೂ ಜೆಸಿಐ ಸಂಸ್ಥೆಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕ ಸೇವೆ ಎಂಬುದು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿರಂತರವಾಗಿ ನಡೆಯಬೇಕಾದ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಹಲವು ವರ್ಷಗಳಿಂದ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ಜೆಸಿ ಕುಂದಾಪುರ ಸಿಟಿ ಸಂಸ್ಥೆಯ ಮಾರ್ಗದರ್ಶನದಲ್ಲಿ ಹಲವು ವರ್ಷಗಳಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಸಂಸ್ಥೆ ಈ ಹಂತಕ್ಕೆ ಬೆಳೆಯಲು ಹಿರಿಯ ಪದಾಧಿಕಾರಿಗಳು ಹಾಗೂ ಸದಸ್ಯರ ಕೊಡುಗೆ ಮಹತ್ವದ್ದಾಗಿದೆ ಎಂದು ರೋಹನ್ ಡಿ’ಕೋಸ್ಟಾ ಹೇಳಿದರು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಕುಂದಾಪುರ ವೆಸ್ಟ್ ಝೋನ್ ಅಧ್ಯಕ್ಷ ಹುಸೇನ್ ಹೈಕಾಡಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲೆ 317 ಸಿ ಯಾ ಪೂರ್ವ ಪ್ರಾಂತಿಯ ಅಧ್ಯಕ್ಷ Ln ರಜತ್ ಕುಮಾರ್ ಹೆಗ್ಡೆ ವಲಯ ಅಧ್ಯಕ್ಷ Ln ಮೊಹಮ್ಮದ್ ಅಶ್ರಫ್, ಜೆಸಿಐ ಕುಂದಾಪುರ ಸಿಟಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಲಯನ್ಸ್ ಕ್ಲಬ್‌ನ ಪ್ರಮುಖರು, ಸ್ಪರ್ಧಾಳುಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಕುಂದಾಪುರ ವೆಸ್ಟ್ ಝೋನ್ ಅಧ್ಯಕ್ಷ ಹುಸೇನ್ ಹೈಕಾಡಿ ಸ್ವಾಗತಿಸಿ, ವಂದಿಸಿದರು.