


ಡೈಲಿವಾರ್ತೆ:23/ಸೆ./2026

ಖೋ-ಖೋ ಪಂದ್ಯಾವಳಿ: ವಿಭಾಗ ಮಟ್ಟಕ್ಕೆ ಆಯ್ಕೆಯಾದ ಮಣೂರು ಪಡುಕರೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಮೂವರು ವಿದ್ಯಾರ್ಥಿಗಳು

ಕೋಟ: ಉಡುಪಿ ಜಿಲ್ಲಾ ಮಟ್ಟದ ಅಂಡರ್-14 ಬಾಲಕರ ಖೋ-ಖೋ ಪಂದ್ಯಾವಳಿ ತಲ್ಲೂರಿನಲ್ಲಿ ನಡೆಯಿತು.

ಪಂದ್ಯಾವಳಿಯಲ್ಲಿ ಮಣೂರು ಪಡುಕರೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿದರು.
ಪಂದ್ಯಾವಳಿಯಲ್ಲಿ ಶಾಲೆಯ ಅಂಡರ್-14 ಬಾಲಕರ ವಿಭಾಗದ ಮೂವರು ವಿದ್ಯಾರ್ಥಿಗಳು ಉತ್ತಮ ಆಟ ಪ್ರದರ್ಶಿಸಿ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದು, ಮುಂದಿನ ಹಂತದ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ