ಡೈಲಿವಾರ್ತೆ:08/ಅ./2026

ಅ.12ಕ್ಕೆ ಮೆಲ್ಕಾರ್ ನಲ್ಲಿ ಶ್ರೀ ಶಂಕರ ಪತ್ತಿನ ಸಹಕಾರ ಸಂಘದ ನೂತನ ಪ್ರಧಾನ ಕಚೇರಿಯ ಉದ್ಘಾಟನೆ

ಬಂಟ್ವಾಳ : ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಲ್ಲಿ ಕಾರ್ಯಾಚರಿಸುತ್ತಿದ್ದ ಶ್ರೀ ಶಂಕರ ಪತ್ತಿನ ಸಹಕಾರ ಸಂಘ ನಿ. ಇದರ ಸುಸಜ್ಜಿತ ನೂತನ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭವು ಅಕ್ಟೋಬರ್ 12 ರಂದು ಮೇಲ್ಭಾರ್ ನ ಸಾರಾ ಆರ್ಕೇಡ್ ನ ಪ್ರಥಮ ಮಹಡಿಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ತಿಳಿಸಿದರು.

ಬಿ.ಸಿ.ರೋಡ್ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಗಳು ನೂತನ ಪ್ರಧಾನ ಕಛೇರಿಯನ್ನು ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಅಧ್ಯಕ್ಷತೆ ವಹಿಸುವರು ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದು, ಮಾಜಿ ಸಚಿವ ಬಿ.ರಮಾನಾಥ ರೈ ವಿಶೇಷ ಠೇವಣಿ ಬಿಡುಗಡೆಗೊಳಿಸುವರು. ಉದ್ಯಮಿ ಚಂದ್ರಹಾಸ ಶೆಟ್ಟಿ, ಹೋಟೆಲ್ ರಂಗೋಲಿ ನಾಮಫಲಕ ಅನಾವರಣ ಗೊಳಿಸುವರು.

ಸಹಕಾರ ಅಭಿವೃದ್ಧಿ ಅಧಿಕಾರಿ ಡಾ. ಜ್ಯೋತಿ ಡಿ., ಉದ್ಯಮಿಗಳಾದ ಸಂಜೀವ ಪೂಜಾರಿ ಗುರುಕೃಪಾ, ರಾಜೇಂದ್ರ ಹೊಳ್ಳ ಕಲ್ಲಡ್ಕ,
ಎಂ. ಎನ್. ಕುಮಾರ್ ಮೆಲ್ಕಾರ್, ಜಿ. ಯೋಗೀಶ್ ನಾಯಕ್ ವೈಭವ್, ಸಂಜೀವ ನಾಯ್ಕ್ ನಿರ್ಬೈಲು ಮಂಚಿ, ಆಯಿಷಾ ಸನಹ ಕುಪ್ಪೆಪದವು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದವರು ವಿವರಿಸಿದರು.

ಸಂಘದ ಉಪಾಧ್ಯಕ್ಷ ಜಯಾನಂದ ಪೆರಾಜೆ, ಪ್ರಧಾನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಭವ್ಯ ನಿರ್ದೇಶಕರಾದ ರವೀಂದ್ರ ಕುಕ್ಕಾಜೆ, ರಾಹೋಡಿ ಈಶ್ವರ ಭಟ್ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.