ಡೈಲಿವಾರ್ತೆ:15/ಅ./2026

ತುಂಬೆ : ದ.ಕ. ಜಿಲ್ಲಾ ಮಟ್ಟದ ಶಾಲಾ ಕ್ರೀಡಾಕೂಟದ ಮಾಹಿತಿ ಕೈಪಿಡಿ ಬಿಡುಗಡೆ, ಅ. 27,ಮತ್ತು 28 ರಂದು ಮಂಗಳೂರಿನಲ್ಲಿ ಕ್ರೀಡಾ ಕೂಟ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ತುಂಬೆ ವಿದ್ಯಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ಸಾಮಾನ್ಯ ಹಾಗೂ ವಿಶೇಷ ಚೇತನ ಬಾಲಕ-ಬಾಲಕಿಯರ ಕ್ರೀಡಾ ಕೂಟದ ಮಾಹಿತಿ ಕೈಪಿಡಿಯನ್ನು ಬುಧವಾರ ಬಿಡುಗಡೆ ಗೊಳಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈ ಕ್ರೀಡಾಕೂಟವು ಅಕ್ಟೋಬರ್ 27 ಮತ್ತು 28 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮಾಹಿತಿ ಕೈಪಿಡಿಯನ್ನು
ತುಂಬೆ ಗ್ರೂಪ್ ಯು.ಎ.ಇ.ಯ ಸಂಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಯಿದಿನ್ ಅವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ತುಂಬೆ ಬಿ.ಇ. ಶಿಕ್ಷಣ ಸಂಸ್ಥೆಯ ಟ್ರಸ್ಟಿ ಬಿ.ಎಂ. ಅಶ್ರಫ್, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಜಗದೀಶ ರೈ ಬಿ., ಮುಖ್ಯ ಶಿಕ್ಷಕಿ ವಿದ್ಯಾ ಕೆ., ದೈಹಿಕ ಶಿಕ್ಷಣ ಶಿಕ್ಷಕಿ ಮೋಲಿ ಎಡ್ಮಾ ಗೊನ್ಸಾಲ್ವಿಸ್, ಕಚೇರಿ ಅಧೀಕ್ಷಕರಾದ ಬಿ. ಅಬ್ದುಲ್ ಕಬೀರ್ ಉಪಸ್ಥಿತರಿದ್ದರು.