




ಡೈಲಿವಾರ್ತೆ:18/ಅ./2026

ದಿ. ಲಕ್ಷ್ಮೀಕಾಂತ ಪೂಜಾರಿ ಸ್ಮರಣಾರ್ಥ ಶ್ರೀ ಕುಂದೇಶ್ವರ ದೇವಸ್ಥಾನಕ್ಕೆ ಕುಡಿಯುವ ನೀರಿನ ಶುದ್ಧೀಕರಣ ಯಂತ್ರ ಕೊಡುಗೆ

ಕುಂದಾಪುರ: ಪುತ್ರ ದಿ. ಲಕ್ಷ್ಮೀಕಾಂತ ಪೂಜಾರಿ ಅವರ ಸವಿನೆನಪನ್ನು ಶಾಶ್ವತಗೊಳಿಸುವ ಉದ್ದೇಶದಿಂದ ಶ್ರೀ ಗುರು ಜ್ಯೋತಿ ಜ್ಯೂಸ್ ಸೆಂಟರ್ ಮಾಲೀಕ ನರಸಿಂಹ ಪೂಜಾರಿ ದಂಪತಿಗಳು ಶ್ರೀ ಕುಂದೇಶ್ವರ ದೇವಸ್ಥಾನಕ್ಕೆ ಕುಡಿಯುವ ನೀರಿನ ಶುದ್ಧೀಕರಣ ಯಂತ್ರವನ್ನು ಕೊಡುಗೆಯಾಗಿ ಸಮರ್ಪಿಸಿದರು.

ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಸದುದ್ದೇಶದಿಂದ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಪುತ್ರನ ಸ್ಮರಣಾರ್ಥ ಕುಟುಂಬವು ಸಲ್ಲಿಸಿದ ಕೊಡುಗೆ ಮೆಚ್ಚುಗೆಗೆ ಪಾತ್ರವಾಯಿತು.

ಕುಡಿಯುವ ನೀರಿನ ಶುದ್ಧೀಕರಣ ಯಂತ್ರದ ಉದ್ಘಾಟನೆಯನ್ನು ಕುಂದಾಪುರ ಠಾಣಾಧಿಕಾರಿ ನಂಜ ನಾಯ್ಕ ಎಸ್. ನೆರವೇರಿಸಿ ಶುಭ ಹಾರೈಸಿದರು.
ಶ್ರೀ ಕುಂದೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ವಾಸುದೇವ ಯಡಿಯಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕುಂದಾಪುರ ನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿಜಯ ಎಸ್. ಪೂಜಾರಿ, ರಾಜೇಶ್ ಕಡ್ಗಿ, ಖಾರ್ವಿಕೇರಿಯ ಶ್ರೀ ಮಹಾಂಕಾಳಿ ದೇವಸ್ಥಾನದ ಅಧ್ಯಕ್ಷ ಪ್ರಕಾಶ್ ಖಾರ್ವಿ ಹಾಗೂ ಬಿಲ್ಲವ ಸಮಾಜದ ಮುಖಂಡ ದಿವಾಕರ ಪೂಜಾರಿ ಕಡ್ಗಿಮನೆ ಉಪಸ್ಥಿತರಿದ್ದರು.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನರಸಿಂಹ ಪೂಜಾರಿ ಅವರ ಕುಟುಂಬದ ಸದಸ್ಯರು, ಸ್ನೇಹಿತರು ಹಾಗೂ ಹಿತೈಷಿಗಳು ಸೇರಿದಂತೆ ನೂರಾರು ಮಂದಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ರತ್ನಾಕರ ಶೆರುಗಾರ್ ಹೊನ್ನನಕೇರಿ ಕಾರ್ಯಕ್ರಮ ನಿರೂಪಿಸಿದರು.