ಡೈಲಿವಾರ್ತೆ:19/ಅ./2026

ರಾಜ್ಯಮಟ್ಟದ ಕುಸ್ತಿಯಲ್ಲಿ ವಿವೇಕ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿ ಸೃಷ್ಟಿ ಆರ್.ಗೆ ಪ್ರಥಮ ಸ್ಥಾನ: ರಾಷ್ಟ್ರಮಟ್ಟಕ್ಕೆ ಭರ್ಜರಿ ಆಯ್ಕೆ

ಕೋಟ: ಗದಗದಲ್ಲಿ ನಡೆದ ರಾಜ್ಯಮಟ್ಟದ ಕುಸ್ತಿ ಪಂದ್ಯಾಟದಲ್ಲಿ ವಿವೇಕ ಬಾಲಕಿಯರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿ ಆರ್. ಪ್ರಥಮ ಸ್ಥಾನ ಗಳಿಸುವ ಮೂಲಕ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡಿರುವ ಸೃಷ್ಟಿ ಆರ್. ಅವರು ಶಾಲೆಗೆ ಕೀರ್ತಿ ತಂದಿದ್ದಾರೆ. ಅವರ ಈ ಸಾಧನೆಯು ಶಾಲೆಯ ಕ್ರೀಡಾ ಕ್ಷೇತ್ರದ ಹೆಗ್ಗಳಿಕೆಯನ್ನು ಹೆಚ್ಚಿಸಿದ್ದು, ರಾಷ್ಟ್ರಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆ ಮೂಡಿಸಿದೆ.

ವಿದ್ಯಾರ್ಥಿನಿಗೆ ಕುಸ್ತಿ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕಿ ಮಮತಾ ಅವರ ಮಾರ್ಗದರ್ಶನ ಹಾಗೂ ಪರಿಶ್ರಮವನ್ನು ಶಾಲೆಯ ಆಡಳಿತ ಮಂಡಳಿ ಶ್ಲಾಘಿಸಿದೆ. ವಿದ್ಯಾರ್ಥಿನಿ ಸೃಷ್ಟಿ ಆರ್., ತರಬೇತುದಾರರಾದ ದೈಹಿಕ ಶಿಕ್ಷಣ ಶಿಕ್ಷಕಿ ಮಮತಾ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಪ್ರೇಮಾನಂದ ಅವರನ್ನು ಆಡಳಿತ ಮಂಡಳಿ ಅಭಿನಂದಿಸಿ ಮುಂದಿನ ಸ್ಪರ್ಧೆಗಳಿಗೆ ಶುಭ ಹಾರೈಸಿದೆ.