ಡೈಲಿವಾರ್ತೆ:20/ಅ./2026

ಕೋಟ ಪೊಲೀಸ್ ಠಾಣೆಯಲ್ಲಿ ಸಡಗರದ ಆಯುಧ ಪೂಜೆ: ದಸರಾ ಸಂಭ್ರಮ

ಕೋಟ: ದಸರಾ ಹಬ್ಬದ ಅಂಗವಾಗಿ ಕೋಟ ಪೊಲೀಸ್ ಠಾಣೆಯಲ್ಲಿ ಶಾರದಾ ಪೂಜೆ, ಆಯುಧ ಪೂಜೆ ಹಾಗೂ ವಾಹನ ಪೂಜೆಯನ್ನು ಸಾಂಪ್ರದಾಯಿಕವಾಗಿ ಮತ್ತು ಸಡಗರದಿಂದ ನೆರವೇರಿಸಲಾಯಿತು.

ಪ್ರತಿ ವರ್ಷದ ಸಂಪ್ರದಾಯದಂತೆ ಈ ಬಾರಿಯೂ ಮಣೂರು ಮಧುಸೂದನ್ ಬಾಯಿರಿ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ಸರಳವಾಗಿ ಜರುಗಿದವು. ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್., ಎಸ್ಐ ಮಾಂತೇಶ ಜಾಬ್ ಗೌಡ, ಎಎಸ್ಐ ಗೋಪಾಲ್ ಪೂಜಾರಿ, ಹಾಗೂ ಪೊಲೀಸ್ ಸಿಬ್ಬಂದಿ ಪೂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಹಬ್ಬದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯ ಆವರಣವನ್ನು ವಿದ್ಯುತ್ ದೀಪಗಳು ಹಾಗೂ ಹೂವುಗಳಿಂದ ಅಲಂಕರಿಸಲಾಗಿತ್ತು. ಪೂಜಾ ಕಾರ್ಯಕ್ರಮದಲ್ಲಿ ಸ್ಥಳೀಯ ಗಣ್ಯರು, ಊರಿನ ಪ್ರಮುಖರು ಹಾಗೂ ಪತ್ರಕರ್ತರು ಭಾಗವಹಿಸಿ ತೀರ್ಥ-ಪ್ರಸಾದ ಸ್ವೀಕರಿಸಿದರು.
ಪೊಲೀಸ್ ಠಾಣೆಯಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮವು ದಸರಾ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾಯಿತು.