ಡೈಲಿವಾರ್ತೆ:21/ಅ./2026

ಕೋಟ ಶ್ರೀ ಕ್ಷೇತ್ರ ಅಮೃತೇಶ್ವರಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಭೇಟಿ: ಆಡಳಿತ ಮಂಡಳಿಯಿಂದ ಗೌರವದ ಸ್ವಾಗತ

ಕೋಟ: ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಕೋಟ ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ 10ನೇ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಅವರು ಜಿಲ್ಲಾಧಿಕಾರಿಯನ್ನು ಆತ್ಮೀಯವಾಗಿ ಸ್ವಾಗತಿಸಿ, ದೇವರ ಗಂಧಪ್ರಸಾದ ನೀಡಿ ಗೌರವಿಸಿದರು.

ಧಾರ್ಮಿಕ ಶ್ರದ್ಧೆ ಹಾಗೂ ಸಂಪ್ರದಾಯದ ಹಿನ್ನೆಲೆಯಲ್ಲಿನ ಈ ಭೇಟಿಯ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದು, ಮಹೋತ್ಸವದ ಧಾರ್ಮಿಕ ವಾತಾವರಣಕ್ಕೆ ಸಾಕ್ಷಿಯಾದರು.
ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಸುಬ್ರಾಯ ಜೋಗಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಗಣೇಶ್ ಕೆ. ನೆಲ್ಲಿಬೆಟ್ಟು, ಸುಧಾ ಎ. ಪೂಜಾರಿ, ಜ್ಯೋತಿ ಡಿ. ಕಾಂಚನ್, ಶಿವ ಪೂಜಾರಿ, ರತನ್ ಐತಾಳ್, ಸುಭಾಸ್ ಶೆಟ್ಟಿ ಗಿಳಿಯಾರು ಹಾಗೂ ಚಂದ್ರಶೇಖರ್ ಆಚಾರ್ ಉಪಸ್ಥಿತರಿದ್ದರು