




ಡೈಲಿವಾರ್ತೆ:22/ಅ./2026

ಮಣಿಪಾಲದ ಸರ್ಕಾರಿ ಜಾಗದಲ್ಲಿ ಮಾನವ ಅಸ್ಥಿಪಂಜರದ ಅವಶೇಷ ಪತ್ತೆ!

ಉಡುಪಿ: ಮಣಿಪಾಲದ ಅನಂತನಗರದ ಮೂರನೇ ಕ್ರಾಸ್ನಲ್ಲಿರುವ ಸರ್ಕಾರಿ ಜಾಗದಲ್ಲಿ ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಖಾಲಿ ಜಾಗವನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದ್ದ ವೇಳೆ ಭಾಗಶಃ ತಲೆಬುರುಡೆ ಹಾಗೂ ಕೈಗಳ ಮೂಳೆಗಳು ಪತ್ತೆಯಾಗಿವೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು, ಪತ್ತೆಯಾದ ಮೂಳೆಗಳ ಅವಶೇಷಗಳನ್ನು ಸಂಗ್ರಹಿಸಿ ಮುಂದಿನ ತನಿಖೆಗಾಗಿ ಮಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಪತ್ತೆಯಾಗಿರುವ ಮೂಳೆಗಳು ಯಾರಿಗೆ ಸೇರಿವೆ, ಅವು ಎಷ್ಟು ಹಳೆಯವು ಹಾಗೂ ಅವುಗಳ ಹಿನ್ನೆಲೆ ಏನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ವಿಧಿವಿಜ್ಞಾನ ಪರೀಕ್ಷೆಯ ವರದಿ ಲಭ್ಯವಾದ ಬಳಿಕ ಈ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.