ಡೈಲಿವಾರ್ತೆ:27/ಅ./2026

ಶಿವಮೊಗ್ಗ: ವಿದ್ಯುತ್ ಶಾಕ್ ತಗುಲಿ 14 ವರ್ಷದ ಬಾಲಕ ಸಾವು

ಶಿವಮೊಗ್ಗ: ನಗರದ ವಾದಿ ಎ ಹುದಾ ಬಡಾವಣೆಯಲ್ಲಿ ಬಟ್ಟೆಗೆ ಇಸ್ತ್ರಿ ಮಾಡುವ ವೇಳೆ ವಿದ್ಯುತ್ ಶಾಕ್ ತಗುಲಿ 14 ವರ್ಷದ ಬಾಲಕನೊಬ್ಬ ಸೋಮವಾರ ಮೃತಪಟ್ಟಿದ್ದಾನೆ.

ಮೃತ ಬಾಲಕನನ್ನು ಉಮರ್ ಫಾರೂಕ್ (14) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಬಟ್ಟೆಗೆ ಇಸ್ತ್ರಿ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿದ್ದು, ಕುಟುಂಬದವರು ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಬಾಲಕನ ಸಾವಿನಿಂದ ಕುಟುಂಬದವರು ದುಃಖಿತರಾಗಿದ್ದು, ಶಿಕ್ಷಕರು ಹಾಗೂ ಸಹಪಾಠಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.