


ಡೈಲಿವಾರ್ತೆ:29/ಅ./2026




ಶಿವಮೊಗ್ಗ: ಅಪಘಾತದಲ್ಲಿ ಗಾಯಗೊಂಡಿದ್ದ ಹೆಡ್ ಕಾನ್ಸ್ಟೇಬಲ್ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕಾರಿಪುರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಗಿರೀಶ್ ಕುಮಾರ್ (33) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಶಿಕಾರಿಪುರ ತಾಲೂಕಿನ ಸಾಲೂರು ಗ್ರಾಮದ ನಿವಾಸಿಯಾಗಿದ್ದ ಗಿರೀಶ್ ಕುಮಾರ್ ಅವರು, ಎರಡು ವಾರಗಳ ಹಿಂದೆ ಚಿಕ್ಕಾಪುರ ಕ್ರಾಸ್ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು.
ಅಪಘಾತದ ಬಳಿಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ಗಿರೀಶ್ ಕುಮಾರ್ ಅವರ ನಿಧನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

