ಡೈಲಿವಾರ್ತೆ:30/ಅ./2026

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಸೃಷ್ಟಿ ಅರುಣ್‌ಗೆ 95.75% ಅಂಕ: ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

ಉಡುಪಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಕಳೆದ ಮೇ ತಿಂಗಳಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ಸೃಷ್ಟಿ ಅರುಣ್ ಜೆ. ಅವರು ಶೇ. 95.75 ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಅವರು ಅಮ್ಮುಂಜೆಯ ವಿದ್ವಾನ್ ಕೆ. ಭವಾನಿ ಶಂಕರ್ ಅವರ ಶಿಷ್ಯೆಯಾಗಿದ್ದು, ಭರತನಾಟ್ಯ ಅಭ್ಯಾಸದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಸೃಷ್ಟಿ ಅವರು ಉಪ್ಪೂರಿನ ಅರುಣ್ ಜೆ. ಹಾಗೂ ಸುಚಿತ್ರಾ ಅರುಣ್ ದಂಪತಿಯ ಪುತ್ರಿಯಾಗಿದ್ದಾರೆ. ಅವರ ಈ ಸಾಧನೆಗೆ ಕುಟುಂಬದವರು, ಗುರುಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.