


ಡೈಲಿವಾರ್ತೆ:30/ಅ./2026




ಕುಂದಾಪುರ: ಅಡುಗೆ ಮಾಡುವಾಗ ಸೀರೆಗೆ ಬೆಂಕಿ ತಗುಲಿ 81 ವರ್ಷದ ವೃದ್ಧೆ ಸಾವು

ಕುಂದಾಪುರ: ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಸೀರೆಗೆ ಗ್ಯಾಸ್ ಸ್ಟೌವ್ನ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ 81 ವರ್ಷದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಹೆಮ್ಮಾಡಿಯಲ್ಲಿ ನಡೆದಿದೆ.
ಮೃತರನ್ನು ಹೆಮ್ಮಾಡಿ ಗ್ರಾಮದ ಅಕ್ಕಮ್ಮ (81) ಎಂದು ಗುರುತಿಸಲಾಗಿದೆ. ಅ. 28ರಂದು ಸಂಜೆ ಸುಮಾರು 4:30ರ ವೇಳೆಗೆ ಅಕ್ಕಮ್ಮ ಅವರು ಮನೆಯಲ್ಲಿ ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಅವರ ಸೀರೆಗೆ ಗ್ಯಾಸ್ ಸ್ಟೌವ್ನ ಬೆಂಕಿ ತಗುಲಿದೆ ಎನ್ನಲಾಗಿದೆ.
ತಕ್ಷಣ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅದೇ ದಿನ ರಾತ್ರಿ ಸುಮಾರು 9:30ರ ವೇಳೆಗೆ ಅಕ್ಕಮ್ಮ ಮೃತಪಟ್ಟಿದ್ದಾರೆ.
ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 37/2026ರಂತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಕಲಂ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

